HomeEntertainment45 ವರ್ಷಗಳ ಆರ್ಟ್ ಆಫ್ ಲಿವಿಂಗ್ ಸಂಭ್ರಮ: ಬಾಲಿವುಡ್-ರಾಜಕೀಯ ತಾರೆಯರ ನಡುವೆ ಗುರೂಜಿ ಮಹೋತ್ಸವ!

45 ವರ್ಷಗಳ ಆರ್ಟ್ ಆಫ್ ಲಿವಿಂಗ್ ಸಂಭ್ರಮ: ಬಾಲಿವುಡ್-ರಾಜಕೀಯ ತಾರೆಯರ ನಡುವೆ ಗುರೂಜಿ ಮಹೋತ್ಸವ!

For Dai;y Updates Join Our whatsapp Group

Spread the love

ಬೆಂಗಳೂರಿನಲ್ಲಿ ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ 45 ವರ್ಷಗಳ ಸಂಭ್ರಮಾಚರಣೆ ಭವ್ಯವಾಗಿ ನಡೆಯಿತು. ಕನಕಪುರ ರಸ್ತೆಯಲ್ಲಿರುವ ಅಂತರರಾಷ್ಟ್ರೀಯ ಕೇಂದ್ರದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ದೇಶದ ಚಿತ್ರರಂಗದ ಪ್ರಮುಖ ತಾರೆಯರು, ನಿರ್ದೇಶಕರು ಹಾಗೂ ರಾಜಕೀಯ ಗಣ್ಯರು ಭಾಗವಹಿಸಿದರು.

ಶ್ರೀ ಶ್ರೀ ರವಿಶಂಕರ್ ಗುರೂಜಿ ಅವರ ಸೇವಾ ಕಾರ್ಯಗಳನ್ನು ಗೌರವಿಸಲು ಆಯೋಜಿಸಲಾದ ಈ ಕಾರ್ಯಕ್ರಮದಲ್ಲಿ ಕೇರಳ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್, ನಿರ್ದೇಶಕ ರಾಜ್ ಕುಮಾರ್ ಹಿರಾನಿ, ನಟ ವಿಕ್ರಾಂತ್ ಮಾಸ್ಸಿ, ಹಾಸ್ಯನಟ ಸುನಿಲ್ ಗ್ರೋವರ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ವಿಕ್ರಾಂತ್ ಮಾಸ್ಸಿ ಅವರು ಗುರೂಜಿ ಅವರ ಜೀವನಾಧಾರಿತ ‘ವೈಟ್’ ಸಿನಿಮಾದಲ್ಲಿ ನಟಿಸುತ್ತಿರುವುದಾಗಿ ತಿಳಿಸಿ ಭಾವುಕರಾದರೆ, ರಾಜ್ ಕುಮಾರ್ ಹಿರಾನಿ ಅವರು ತಮ್ಮ ತಂಡಕ್ಕೆ ಸುದರ್ಶನ ಕ್ರಿಯೆ ಕಲಿಸುವ ಅನುಭವವನ್ನು ಹಂಚಿಕೊಂಡರು.

ಕಾರ್ಯಕ್ರಮದಲ್ಲಿ ಭಾಗವಹಿಸಿದ ಗಣ್ಯರು ಗುರೂಜಿ ಅವರ ಮಾನವೀಯ ಕಾರ್ಯವನ್ನು ಶ್ಲಾಘಿಸಿದರು. ವಿಶೇಷವಾಗಿ ನಡೆದ ‘ಇಂಟ್ಯೂಷನ್ ಫೆಸ್ಟ್’ನಲ್ಲಿ ಸಾವಿರಾರು ಮಕ್ಕಳು ಭಾಗವಹಿಸಿ ತಮ್ಮ ವಿಶಿಷ್ಟ ಪ್ರತಿಭೆಯನ್ನು ಪ್ರದರ್ಶಿಸುವ ಮೂಲಕ ಕಾರ್ಯಕ್ರಮಕ್ಕೆ ವಿಶೇಷ ಆಕರ್ಷಣೆ ತಂದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!