ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಪಟ್ಟಣದ ಅಗಡಿ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ಮಹಾಶಿವರಾತ್ರಿ ದಿನ ಶ್ರೀ ಮುಕ್ತಿಮಂದಿರ ಧರ್ಮ ಕ್ಷೇತ್ರದಲ್ಲಿ ತ್ರಿಕೋಟಿ ಲಿಂಗ ಸ್ಥಾಪನೆಗಾಗಿ ಸಿದ್ದಗೊಂಡಿರುವ 5 ಸಾವಿರ ಶಿವಲಿಂಗಗಳನ್ನು ಶುಭ್ರಗೊಳಿಸಿ ಪೂಜೆ ಸಲ್ಲಿಸುವ ಸೇವಾ ಕಾರ್ಯದ ಮೂಲಕ ಶೃದ್ಧಾ-ಭಕ್ತಿಯಿಂದ ಶಿವರಾತ್ರಿ ಹಬ್ಬದಲ್ಲಿ ಪಾಲ್ಗೊಂಡರು.
ಕಾಲೇಜಿನ ಪ್ರಾಚಾರ್ಯ ಡಾ.ಪರಶುರಾಮ ಬಾರ್ಕಿ ಮಾರ್ಗದರ್ಶನ ಮತ್ತು ಎನ್‌ಎಸ್‌ಎಸ್ ಘಟಕದ ಅಧಿಕಾರಿ ಪ್ರೊ. ಸೋಮಶೇಖರ ಕೆರಿಮನಿ ಅವರ ನೇತೃತ್ವದಲ್ಲಿ ನೂರಾರು ವಿದ್ಯಾರ್ಥಿ-ವಿದ್ಯಾರ್ಥಿನಿಯರು ಧರ್ಮಕ್ಷೇತ್ರಕ್ಕೆ ಆಗಮಿಸಿ ಶಿವಲಿಂಗಗಳನ್ನು ನೀರಿನಿಂದ ಶುಭ್ರಗೊಳಿಸಿ ವಿಭೂತಿ ಲೇಪಿಸಿ, ಪುಷ್ಪ, ಬಿಲ್ವಪತ್ರೆಗಳಿಂದ ಅಲಂಕರಿಸಿದರು. ಪೂಜಿತಗೊಂಡ ಶಿವಲಿಂಗಗಳನ್ನು ಆಗಮಿಸಿದ ಅಪಾರ ಭಕ್ತರು ಸ್ಪರ್ಶಿಸಿ ಭಕ್ತಿಯಿಂದ ನಮಿಸಿದರು. ಕಾಲೇಜಿನ ಪ್ರೊ. ಸಿ.ಎಂ. ಕಗ್ಗಲಗೌಡರ, ಪ್ರೊ. ಷಣ್ಮುಕ ಗಡ್ಡೆಣ್ಣವರ, ಪ್ರೊ. ಅರುಣ ಕುಂಬಿ, ಪ್ರೊ. ಪ್ರಕಾಶ ಹೊಂಗಲ, ಪ್ರೊ.ಅರುಣ ತಂಡಿ, ಮಲ್ಲಯ್ಯ ಹಿರೇಮಠ ಮತ್ತು ಸಿಬ್ಬಂದಿ ಸೇರಿ ಹಲವರು ವಿದ್ಯಾರ್ಥಿಗಳ ಸೇವಾ ಕಾರ್ಯಕ್ಕೆ ಸಹಕರಿಸಿದರು.
ಪ್ರತಿ ವರ್ಷ ಶಿವರಾತ್ರಿ ಹಬ್ಬದ ದಿನ ಅಗಡಿ ಇಂಜನೀಯರಿಂಗ್ ಕಾಲೇಜಿನ ನೂರಾರು ವಿದ್ಯಾರ್ಥಿಗಳು ಸ್ವಯಂ ಪ್ರೇರಣೆ ಮತ್ತು ಭಕ್ತಿಯಿಂದ ಕ್ಷೇತ್ರದಲ್ಲಿನ ಸಾವಿರಾರು ಶಿವಲಿಂಗಗಳಿಗೆ ಜಲಪ್ರೋಕ್ಷಣೆ ಮಾಡಿ ಅಲಂಕರಿಸುವ ಮೂಲಕ ಶಿವರಾತ್ರಿ ಜಾತ್ರಾಮಹೋತ್ಸವಕ್ಕೆ ಜೀವಕಳೆ ನೀಡುತ್ತಿರುವುದು ನಮಗೆ ಸಂತಸ ತಂದಿದೆ ಎನ್ನುತ್ತಾರೆ ಕ್ಷೇತ್ರದ ಪಟ್ಟಾಧ್ಯಕ್ಷರಾದ ಶ್ರೀ ವಿಮಲ ರೇಣುಕ ಶ್ರೀಗಳು.