ವಿಜಯಸಾಕ್ಷಿ ಸುದ್ದಿ, ಗದಗ: ಇಲ್ಲಿನ ನೆಹರು ಯುವ ಕೇಂದ್ರ, ಜಿ.ಟಿ. ಮಹಾವಿದ್ಯಾಲಯ ಹಾಗೂ ರಾಷ್ಟ್ರೀಯ ಸೇವಾ ಯೋಜನಾ ಘಟಕ ಇವರ ಸಂಯುಕ್ತ ಆಶ್ರಯದಲ್ಲಿ ಬಲಿದಾನ ದಿವಸವನ್ನು ಆಚರಿಸಲಾಯಿತು.
Advertisement
ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ವೀರೇಂದ್ರಗೌಡ್ ಪಾಟೀಲ್ ಮಾತನಾಡಿ, ಈ ನೆಲದ ವೀರ ಸ್ವಾತಂತ್ರ‍್ಯ ಹೋರಾಟಗಾರರು ಹಾಗೂ ಅಮರ ಸೇನಾನಿಗಳಾದ ಭಗತ್ ಸಿಂಗ್, ರಾಜಗುರು ಮತ್ತು ಸುಖದೇವರು ಭಾರತಾಂಬೆಯ ಪರಾಕ್ರಮಿ ಸುಪುತ್ರರು. ಅವರ ತ್ಯಾಗ, ಹೋರಾಟ ಮತ್ತು ಆದರ್ಶಗಳು ನಮ್ಮೆಲ್ಲರಿಗೂ ಸ್ಪೂರ್ತಿದಾಯಕವಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ನೆಹರು ಯುವ ಕೇಂದ್ರದ ಜಿಲ್ಲಾ ಯುವ ಅಧಿಕಾರಿಗಳಾದ ಎನ್. ರಂಜನಿ, ರವಿ ಹೊಂಬಾಳೆ, ಮಹಾವಿದ್ಯಾಲಯದ ಉಪನ್ಯಾಸಕರಾದ ವಿಶ್ವನಾಥ, ಜಗನ್, ನಾಗರಾಜ್ ಮತ್ತು ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಸ್ವಯಂ ಸೇವಕರು ಭಾಗವಹಿಸಿದ್ದರು.