ವಿಜಯಸಾಕ್ಷಿ ಸುದ್ದಿ, ಗದಗ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ನಾಡಪ್ರಭು ಕೆಂಪೇಗೌಡ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಗೌರವ ಅರ್ಪಿಸಲಾಯಿತು.
ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಹಾಗೂ ಜಿಲ್ಲಾ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಡಾ. ಬಸವರಾಜ ಬಳ್ಳಾರಿ, ನಿಕಟ ಪೂರ್ವ ಜಿಲ್ಲಾಧ್ಯಕ್ಷ ಡಾ. ರವಿ ಗುಂಜೀಕರ, ವಾರ್ತಾಧಿಕಾರಿ ವಸಂತ ಮಡ್ಲೂರ, ತಾಪಂ ಇಒ ಶ್ರೀಧರ ಚಿನಗುಂಡಿ, ರಾಜು ಕಂಟಿಗೊನ್ನವರ, ರಾಜು ಸೊಪಡ್ಲ, ನವೀನ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.



