ಮೈಸೂರು: ಸರ್ಕಾರದ ಬೇಜವಾಬ್ದಾರಿತನದಿಂದ ಸಂಭ್ರಮಾಚರಣೆ ಶೋಕಾಚರಣೆಯಾಗಿ ಬದಲಾಯಿತು ಎಂದು ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಂಸದ ಪ್ರತಾಪ್ ಸಿಂಹ ಕಿಡಿಕಾರಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಸರ್ಕಾರದ ಬೇಜವಾಬ್ದಾರಿತನದಿಂದ ಸಂಭ್ರಮಾಚರಣೆ ಶೋಕಾಚರಣೆಯಾಗಿ ಬದಲಾಯಿತು.
ಸಿದ್ದರಾಮಯ್ಯ ಬರೀ ಒರಟು ವ್ಯಕ್ತಿ ಅಂದುಕೊಂಡಿದ್ದೆ. ನೀವು ಸಂವೇದನೆ ಇಲ್ಲದ ನಿರ್ಭಾವುಕ ಮನುಷ್ಯ ಎಂಬುದು ನಿನ್ನೆ ಗೊತ್ತಾಯಿತು. ಸಿದ್ದರಾಮಯ್ಯ ನಿರ್ಭಾವುಕ ನಿರ್ಲಜ್ಜ ವ್ಯಕ್ತಿ ಎಂದು ವಾಗ್ದಾಳಿ ನಡೆಸಿದ್ದಾರೆ.
ಸಿಎಂ ಮೊಮ್ಮಗ, ಸಚಿವರು ಮತ್ತು ಅಧಿಕಾರಿಗಳ ಮಕ್ಕಳ ಫೋಟೋಗ್ರಾಫ್ ಆಟೋಗ್ರಾಫ್ಗಾಗಿ ವಿಧಾನಸೌಧದ ಮುಂದೆ ಕಾರ್ಯಕ್ರಮ ನಡೆಯಿತು. ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ಗೆ ಭದ್ರತೆಯ ಪಾಠ ಮಾಡಿದ್ದ ಸಂತೋಷ್ ಲಾಡ್,
ಪ್ರಿಯಾಂಕ್ ಖರ್ಗೆ ಈಗ ಎಲ್ಲಿ ಹೋದ್ರು? ಯುಪಿ ಸಿಎಂ 60 ಕೋಟಿ ಜನರನ್ನು ಸಂಭಾಳಿಸಿದ್ದಾರೆ. ನೀವು 60 ಸಾವಿರ ಜನರನ್ನು ಸಂಭಾಳಿಸಲು ಆಗಲಿಲ್ಲ. ಕಾಂಗ್ರೆಸ್ಗೆ ದರಿದ್ರ ಬಂದಿದೆ. ಆರ್ಸಿಬಿ ಗೆಲುವಲ್ಲಿ ಪ್ರಚಾರ ಪಡೆಯಲು ಜನರನ್ನು ಬಲಿ ಕೊಟ್ಟಿತು ಎಂದು ಬೇಸರ ವ್ಯಕ್ತಪಡಿಸಿದ್ದಾರೆ.