‘ಸೀತಾರಾಮ’ ಧಾರಾವಾಹಿ ನಟಿ ವೈಷ್ಣವಿ ಗೌಡ ಮನೆಯಲ್ಲಿ ಖುಷಿ ತುಂಬಿದೆ. ಜೀ ಕನ್ನಡದಲ್ಲಿ ಪ್ರಸಾರವಾಗುತ್ತಿರೋ ಸೀತಾ ರಾಮ ಸೀರಿಯಲ್ನಲ್ಲಿ ಸೀತಾ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಇದೀಗ ನಟಿ ವೈಷ್ಣವಿ ಗೌಡ ದಾಪಂತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ನಿನ್ನೆ, ಏಪ್ರಿಲ್ 14ರಂದು ನಟಿ ವೈಷ್ಣವಿ ಗೌಡ ಅದ್ಧೂರಿಯಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ನಟಿ ವೈಷ್ಣವಿ ಗೌಡ ಉದ್ಯಮಿ ಜೊತೆಗೆ ಮದುವೆಗೆ ರೆಡಿಯಾಗಿದ್ದಾರೆ.
ಉದ್ಯಮಿ ಅಕಾಯ್ ಹಾಗೂ ವೈಷ್ಣವಿ ಗೌಡ ಗುರು ಹಿರಿಯರ ಸಮ್ಮುಖದಲ್ಲಿ ಒಬ್ಬರೊಬ್ಬರು ಉಂಗುರ ಬದಲಾಯಿಸಿಕೊಂಡಿದ್ದಾರೆ. ನಟಿ ವೈಷ್ಣವಿ ಗೌಡ ನಿಶ್ಚಿತಾರ್ಥ ಸಮಾರಂಭಕ್ಕೆ ಸ್ಯಾಂಡಲ್ವುಡ್ ಸ್ಟಾರ್ ನಟಿ ಅಮೂಲ್ಯ ಗೌಡ ದಂಪತಿ ಭಾಗಿಯಾಗಿದ್ದರು. ಅಲ್ಲದೇ ನಿರೂಪಕಿ ಚೈತ್ರಾ ವಾಸುದೇವನ್, ಪೂಜಾ ಲೋಕೇಶ್, ಜ್ಯೋತಿ ಕಿರಣ್, ರೀತು ಸಿಂಗ್, ಸೇರಿದಂತೆ ಅನೇಕರು ಭಾಗಿಯಾಗಿದ್ದರು.
ಸಂಪ್ರದಾಯಿಕವಾಗಿ ಉದ್ಯಮಿ ಅಕಾಯ್ ಎನ್ನುವವರ ಜೊತೆ ನಟಿ ಅದ್ಧೂರಿಯಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ನಟಿ ವೈಷ್ಣವಿ ಗೌಡ ನಿಶ್ಚಿತಾರ್ಥ ಫೋಟೋಗಳನ್ನು ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಈ ಫೋಟೋಸ್ ನೋಡಿದ ಅಭಿಮಾನಿಗಳು ಫುಲ್ ಖುಷ್ ಆಗಿದ್ದಾರೆ.