ಬೆಳಗಾವಿ ತಾಲೂಕಿನ ನಾವಗೆ ಗ್ರಾಮದಲ್ಲಿರುವ ಸ್ನೇಹಂ ಕಾರ್ಖಾನೆಯ ಲಿಫ್ಟ್‌ನಲ್ಲಿ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಕಾಣಿಸಿಕೊಂಡಿದೆ. ಬಳಿಕ ನೋಡ ನೋಡುತ್ತಿದ್ದಂತೆಯೇ ಬೆಂಕಿಯ ಕೆನ್ನಾಲಿಗೆ ಇಡೀ ಕಾರ್ಖಾನೆಗೆ ವ್ಯಾಪಿಸಿದ್ದು, ಒಳಗೆ ಕಾರ್ಮಿಕರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಅಗ್ನಿ ಶಾಮಕ ದಳ ಸಿಬ್ಬಂದಿ ಹಾಗೂ ಪೊಲೀಸರು ಆಗಮಿಸಿ ಕಾರ್ಯಚರಣೆ ನಡೆಸಿದ್ದಾರೆ.
ಚ್ಚಿನ ಪ್ರಮಾಣದಲ್ಲಿ ಪ್ಲಾಸ್ಟಿಕ್ ಇದ್ದಿದ್ದರಿಂದ ಬೆಂಕಿ ಆವರಿಸಿಕೊಂಡಿದೆ. ಬೃಹತ್ ಪ್ರಮಾಣದಲ್ಲಿ ಬೆಂಕಿ ಆವರಿಸಿಕೊಂಡಿದೆ. ಸುಮಾರು 60ಕ್ಕೂ ಹೆಚ್ಚು ಜನ ಒಳಗೆ ಇದ್ದರು ಎಂಬ ಮಾಹಿತಿ ಇದೆ. ಕಾರ್ಖಾನೆಯ ಲಿಪ್ಟ್ ಬಳಿ 8-10 ಕಾರ್ಮಿಕರು ಇದ್ದರು. ಕೂಡಲೇ ಐದು ಜನರನ್ನು ಹೊರಗೆ ತೆಗೆಯಲಾಗಿದೆ. ಇನ್ನೂ ಅನೇಕರು ಒಳಗೆ ಇದ್ದಿರುವ ಮಾಹಿತಿಇದೆ. ಆದರೆ ಏನು ಆಗಿದೆ ಎಂಬ ಮಾಹಿತಿ ಸಿಕ್ಕಿಲ್ಲ.
ಈ ಬೆಂಕಿ ಅವಘಡಕ್ಕೆ ಶಾರ್ಟ್ ಸರ್ಕ್ಯೂಟ್ ಕಾರಣ ಎನ್ನಲಾಗುತ್ತಿದ್ದು, ಬೆಂಕಿಯ ಕೆನ್ನಾಲಿಗೆ ಇಡೀ ಕಾರ್ಖಾನೆಯನ್ನು ಆವರಿಸಿತ್ತು. ಸುದ್ದಿ ತಿಳಿಯುತ್ತಿದ್ದಂತೆಯೇ ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಆಗಮಿಸಿದವು. ಇತ್ತೀಚಿನ ಮಾಹಿತಿಯ ಪ್ರಕಾರ ಶೇ.70 ರಷ್ಟು ಬೆಂಕಿಯನ್ನು ನಂದಿಸಲಾಗಿದೆ. ಘಟನೆಯಲ್ಲಿ ಗಾಯಗೊಂಡ ಮೂವರನ್ನು ಬೆಳಗಾವಿಯ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.