ಗದಗ: ಸಿಮೆಂಟ್ ಮಿಕ್ಸರ್ ಲಾರಿ ಮತ್ತು ಸ್ಕೂಟಿ ನಡುವೆ ಅಪಘಾತ ಸಂಭವಿಸಿ ಗಜೇಂದ್ರಗಡ ಪೊಲೀಸ್ ಠಾಣೆಯ ಮುಖ್ಯ ಪೇದೆ ಸಾವನ್ನಪ್ಪಿರುವ ಘಟನೆ ಗದಗ ನಗರದ ಭೂಮರಡ್ಡಿ ವೃತ್ತದಲ್ಲಿ ನಡೆದಿದೆ.
ರಮೇಶ ಡಂಬಳ (43) ಸ್ಥಳದಲ್ಲೇ ಸಾವನ್ನಪ್ಪಿದ ಮುಖ್ಯ ಪೇದೆಯಾಗಿದ್ದು, ಸ್ಥಳಕ್ಕೆ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಗೌರಿ ಗಣೇಶ ಹಬ್ಬದ ಪ್ರಯುಕ್ತ ಪೂಜಾ ಸಾಮಗ್ರಿಗಳನ್ನು ತೆಗೆದುಕೊಂಡು ಮನೆ ಕಡೆ ವಾಪಾಸು ಹೋಗುತ್ತಿದ್ದಾಗ ಈ ದುರ್ಘಟನೆ ಜರುಗಿದೆ.
ಗದಗ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.



