HomeKarnataka NewsBREAKING: ವೃಕ್ಷಮಾತೆ ಶತಾಯುಷಿ ಸಾಲುಮರದ ತಿಮ್ಮಕ್ಕ ನಿಧನ..!

BREAKING: ವೃಕ್ಷಮಾತೆ ಶತಾಯುಷಿ ಸಾಲುಮರದ ತಿಮ್ಮಕ್ಕ ನಿಧನ..!

For Dai;y Updates Join Our whatsapp Group

Spread the love

ಬೆಂಗಳೂರು: ಪದ್ಮಶ್ರೀ ಪುರಸ್ಕೃತರಾದ ಸಾಲುಮರದ ತಿಮ್ಮಕ್ಕ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ ಜಯನಗರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೆ ಅವರು ಇಂದು ಮೃತಟಪಟ್ಟಿದ್ದಾರೆ. ಸಾಲುಮರದ ತಿಮ್ಮಕ್ಕ ಅವರ ನಿಧನಕ್ಕೆ ರಾಜಕೀಯ ನಾಯಕರು, ಗಣ್ಯರಿಂದ ಸಂತಾಪ ವ್ಯಕ್ತವಾಗಿದೆ.

ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನಲ್ಲಿ 1911 ಜೂನ್‌ 30ರಂದು ಜನಿಸಿದ್ದ  ಅವರು, ವೃಕ್ಷಮಾತೆ ಎಂದೇ ಪ್ರಸಿದ್ಧಿ ಪಡೆದಿದ್ದರು.ಸಾಲುಮರದ ತಿಮ್ಮಕ್ಕ, ಹುಲಿಕಲ್​​ ಗ್ರಾಮದ ಚಿಕ್ಕಯ್ಯರನ್ನು ವಿವಾಹವಾಗಿದ್ದರು. ಆದರೆ ದುರದೃಷ್ಟವಶಾತ್, ಇವರಿಗೆ ಮಕ್ಕಳಿರಲಿಲ್ಲ. ಹೀಗಾಗಿ ತಮಗೆ ಮಕ್ಕಳಿರದ ದುಃಖವನ್ನು ಮರೆಯಲು ರಸ್ತೆಯ ಬದಿಯಲ್ಲಿ ಆಲದ ಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಭಾವಿಸಿ ಬೆಳೆಸಿದ್ದರು. ಸಾಲು ಮರದ ತಿಮ್ಮಕ್ಕೆ ಎಂದೇ ಪ್ರಸಿದ್ಧರಾಗಿದ್ದ ಇವರಿಗೆ 2019ರಲ್ಲಿ ಪದ್ಮಶ್ರೀ ಲಭಿಸಿತ್ತು.

ಅನಕ್ಷರಸ್ಥೆಯಾಗಿದ್ದರೂ ಪರಿಸರ ಸಂರಕ್ಷಣೆಯಲ್ಲಿ ತಿಮ್ಮಕ್ಕ ಅವರ ಮಹತ್ತರ ಸಾಧನೆಗೆ ಹಲವಾರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳು ಪ್ರಶಸ್ತಿ ನೀಡಿ ಸನ್ಮಾನಿಸಿವೆ. ರಾಜ್ಯೋತ್ಸವ ಪ್ರಶಸ್ತಿ, ಆರ್ಟ್ ಆಫ್ ಲಿವಿಂಗ್ ಸಂಸ್ಥೆಯಿಂದ ವಿಶಾಲಾಕ್ಷಿ ಪ್ರಶಸ್ತಿ, 2010ನೇ ಸಾಲಿನ ಪ್ರತಿಷ್ಠಿತ ‘ನಾಡೋಜ’ ಪ್ರಶಸ್ತಿ ಸೇರಿ 2019ರಲ್ಲಿ ಪದ್ಮಶ್ರೀ ಪ್ರಶಸ್ತಿ ಪ್ರಶಸ್ತಿಗೂ ಇವರು ಪಾತ್ರರಾಗಿದ್ದಾರೆ. 2020ರಲ್ಲಿ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ ತಿಮ್ಮಕ್ಕನವರಿಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!