ಬೆಳಗಾವಿ ಅಧಿವೇಶನದ ಶತಮಾನೋತ್ಸವ: “ಮಹಾತ್ಮಗಾಂಧಿ ಲೋಗೋ” ಅನಾವರಣ ಗೊಳಿಸಿದ ಸಿಎಂ ಸಿದ್ದರಾಮಯ್ಯ

0
Spread the love

ಬೆಳಗಾವಿ: ಬೆಳಗಾವಿಯ ಸುವರ್ಣಸೌಧದಲ್ಲಿ ಇಂದಿನಿಂದ  ಚಳಿಗಾಲದ ಅಧಿವೇಶನ ಆರಂಭವಾಗಿದೆ. ಡಿಸೆಂಬರ್​​ 20ರವರೆಗೆ ಚಳಿಗಾಲದ ಅಧಿವೇಶನ ನಡೆಯಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದ ಆಡಳಿತ ಯಂತ್ರವೇ ಬೆಳಗಾವಿಗೆ ಶಿಪ್ಟ್ ಆಗಿದೆ. ಈ ಬಾರಿ ದುಂದುವೆಚ್ಚ ಮಾಡದಂತೆ ಅಚ್ಚುಕಟ್ಟಾಗಿ ಅಧಿವೇಶನ ಮಾಡಲು ಕಳೆದ ಎರಡು ವಾರದಿಂದ ಬೆಳಗಾವಿ ಜಿಲ್ಲಾಡಳಿತ ಸಾಕಷ್ಟು ತಯಾರಿ ಮಾಡಿಕೊಂಡಿದೆ.

Advertisement

ಅದರಂತೆ ಬೆಳಗಾವಿ ಚಳಿಗಾಲದ ಅಧಿವೇಶನದ ಮೊದಲ ದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು “ಮಹಾತ್ಮ ಗಾಂಧಿ ಅವರ ನೇತೃತ್ವದಲ್ಲಿ ನಡೆದ ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ” ಕಾರ್ಯಕ್ರಮದ ಮಹಾತ್ಮಗಾಂಧಿ ಅವರ ಲೋಗೋ ಅನಾವರಣ ಗೊಳಿಸಿದರು. ಬಳಿಕ ಸುವರ್ಣಸೌಧದ ಮೊದಲ ಮಹಡಿಯಲ್ಲಿ ಅನುಭವ ಮಂಟಪದ ತೈಲ ಕಲಾಕೃತಿಯನ್ನು ಲೋಕಾರ್ಪಣೆಗೊಳಿಸಿದ, ಸಭಾಧ್ಯಕ್ಷರ ಕೊಠಡಿಯಲ್ಲಿ ಅನುಭವ ಮಂಟಪ ತೈಲ ಕಲಾಕೃತಿಯ ಕಲಾವಿದರನ್ನು ಸನ್ಮಾನಿಸಿದರು.


Spread the love

LEAVE A REPLY

Please enter your comment!
Please enter your name here