ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ: ನಗರದ ದಿ ಕಾಟನ್ ಸೇಲ್ ಸೊಸೈಟಿ ಆವರಣದಲ್ಲಿನ ಗದಗ ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯಲ್ಲಿ ಗದಗ-ಬೆಟಗೇರಿ ಶಹರ ಕಾಂಗ್ರೆಸ್ ಸಮಿತಿ ಹಾಗೂ ಮುಳಗುಂದ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಮಹಾತ್ಮ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ನಡೆದ ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮದ ಅಂಗವಾಗಿ ಬೆಳಗಾವಿ ನಗರದಲ್ಲಿ ಹಮ್ಮಿಕೊಳ್ಳುತ್ತಿರುವ ಬೃಹತ್ ಸಮಾವೇಶದ ಕುರಿತು ಡಿ.೨೪ರಂದು ಸಂಜೆ ೪.೩೦ಕ್ಕೆ ಪೂರ್ವಭಾವಿ ಸಭೆ ಹಮ್ಮಿಕೊಳ್ಳಲಾಗಿದೆ.

Advertisement

ಕೆಪಿಸಿಸಿ ಉಪಾಧ್ಯಕ್ಷ ಹಾಗೂ ಮಾಜಿ ಶಾಸಕ ಡಿ.ಆರ್. ಪಾಟೀಲ, ಗದಗ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ಕೃಷ್ಣಗೌಡ ಎಚ್.ಪಾಟೀಲ ಪಾಲ್ಗೊಳ್ಳಲಿದ್ದಾರೆ. ಸಭೆಯಲ್ಲಿ ಪಕ್ಷದ ಜಿಲ್ಲಾ ಪದಾಧಿಕಾರಿಗಳು, ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ, ಗ್ರಾಮ ಪಂಚಾಯಿತಿ, ಎಪಿಎಂಸಿ ಪಕ್ಷದ ಅಧ್ಯಕ್ಷರು, ಸದಸ್ಯರು, ನಗರಸಭೆ, ಪಟ್ಟಣ ಪಂಚಾಯಿತಿ ಅಧ್ಯಕ್ಷರು, ಸದಸ್ಯರು, ಮಹಿಳಾ ಕಾಂಗ್ರೆಸ್, ಯುವ ಕಾಂಗ್ರೆಸ್, ಎಸ್‌ಸಿ/ಎಸ್‌ಟಿ, ಅಲ್ಪಸಂಖ್ಯಾತರ, ವಿದ್ಯಾರ್ಥಿ ಕಾಂಗ್ರೆಸ್, ಕಾಂಗ್ರೆಸ್ ಸೇವಾದಳ, ಹಿಂದುಳಿದ ವರ್ಗ, ಸಾಮಾಜಿಕ ಜಾಲತಾಣ, ರಾಜೀವಗಾಂಧಿ ಪಂಚಾಯತ ಸಂಘಟನೆ, ಮಾಜಿ ಸೈನಿಕರ ವಿಭಾಗ, ಮೀನುಗಾರರ ವಿಭಾಗ, ಕಾರ್ಮಿಕರ ವಿಭಾಗ, ಐಎನ್‌ಟಿಯುಸಿ, ಕಾನೂನು ಮತ್ತು ಮಾನವ ಹಕ್ಕು ವಿಭಾಗ, ಕಿಸಾನ್ ಮತ್ತು ಖೆತ್ ಮಜದೂರ ವಿಭಾಗ, ಮಾಜಿ ಸೈನಿಕರ ವಿಭಾಗ, ವೈದ್ಯರ ವಿಭಾಗ, ವೃತ್ತಿಪರ ವಿಭಾಗ, ಪದವೀಧರ ಹಾಗೂ ಶಿಕ್ಷಕರ ವಿಭಾಗ, ನೀತಿ ಮತ್ತು ಸಂಶೋಧನೆ ತರಬೇತಿ ವಿಭಾಗ, ವಿಕಲಚೇತನರ ವಿಭಾಗ, ಲೀಗಲ್ ರೀಪಾರ್ಮ್ಸ್ ವಿಭಾಗ, ಐಟಿ ಮತ್ತು ಡಾಟಾ ವಿಭಾಗ, ಮಾಧ್ಯಮ ಮತ್ತು ಸಂಪರ್ಕ ಇಲಾಖೆ ವಿಭಾಗಗಳ ಅಧ್ಯಕ್ಷರು ಹಾಗೂ ಸದಸ್ಯರು, ಪಕ್ಷದ ಅಭಿಮಾನಿಗಳು ಪಾಲ್ಗೊಳ್ಳಬೇಕೆಂದು ಗದಗ-ಬೆಟಗೇರಿ ಶಹರ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಬಿ.ಬಿ. ಅಸೂಟಿ, ಮುಳಗುಂದ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಸವರಾಜ ಸುಂಕಾಪೂರ ಹಾಗೂ ಗದಗ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಶೋಕ ಮಂದಾಲಿ ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here