ಬೆಂಗಳೂರು: ರಾಜ್ಯವನ್ನು ತುಳಿಯಲು, ಆರ್ಥಿಕ ಬೆಳವಣಿಗೆ ಕುಗ್ಗಿಸುವ ಕೆಲಸವನ್ನು ಕೇಂದ್ರ ಸರ್ಕಾರ ಮಾಡುತ್ತಿದೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು ರಾಜ್ಯವನ್ನು ತುಳಿಯಲು, ಆರ್ಥಿಕ ಬೆಳವಣಿಗೆ ಕುಗ್ಗಿಸುವ ಕೆಲಸವನ್ನು ಕೇಂದ್ರ ಸರ್ಕಾರ ಮಾಡುತ್ತಿದೆ. ಉತ್ತರ ಭಾರತ, ಗುಜರಾತ್‌ಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ.
ನಮ್ಮ ರಾಜ್ಯಕ್ಕೆ ಅರ್ಹತೆ ಇಲ್ವಾ? ರಾಜ್ಯಕ್ಕೆ ಯೋಜನೆ ಆರ್ಥಿಕ ನೆರವು ಕೊಡುವುದು ಕೇಂದ್ರದ ಕರ್ತವ್ಯ. ಆದರೆ ರಾಜ್ಯಕ್ಕೆ ಅನ್ಯಾಯವಾಗುತ್ತಿದೆ ಎಂದು ಆಕ್ರೋಶ ಹೊರ ಹಾಕಿದರು. ದಕ್ಷಿಣ ಭಾರತಕ್ಕೆ ಕೇಂದ್ರದಿಂದ ಅನ್ಯಾಯವಾಗುತ್ತಿದೆ. ನಾವು ಭಿಕ್ಷೆಕೇಳುತ್ತಿಲ್ಲ. ಬಜೆಟ್‌ನಲ್ಲಿ ಏನು ಯೋಜನೆ ಕೊಟ್ಟಿದ್ದಾರೆ? ವೋಟ್ ಕೇಳಿದ್ದು ಬಿಟ್ಟರೆ ಏನು ಕೊಟ್ಟಿದ್ದಾರೆ? ನೀರಾವರಿ, ಉದ್ಯೋಗ ಸೃಷ್ಟಿ, ಬೆಂಗಳೂರು ಟ್ರಾಫಿಕ್ ಸಮಸ್ಯೆ ಯಾವುದು ಕೂಡ ಬಜೆಟ್‌ನಲ್ಲಿ ಪ್ರಸ್ತಾಪ ಆಗಿಲ್ಲ ಎಂದು ದೂರಿದರು.