ಹುಬ್ಬಳ್ಳಿ: ಕೇಂದ್ರದ ನಾಯಕರು ಸಿದ್ದರಾಮಯ್ಯನವರ ಶಕ್ತಿ ಅಡಗಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯನವರ ನಾಯಕತ್ವ ಮತ್ತು ಶಕ್ತಿ ಕುಂದಿಸಲು ಬಿಜೆಪಿಗರು ಪ್ರಯತ್ನಿಸುತ್ತಿದ್ದಾರೆ. ಇದು ಯಾವುದೇ ಕಾರಣಕ್ಕೂ ನಡೆಯುವುದಿಲ್ಲ ಎಂದು ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಹೇಳಿದರು. ಲೋಕಾಯಕ್ತ ಸಿದ್ದರಾಮಯ್ಯನವರಿಗೆ ನೋಟಿಸ್ ನೀಡಿದೆ.
Advertisement
ಕೇಂದ್ರದ ನಾಯಕರು ಸಿದ್ದರಾಮಯ್ಯನವರ ಶಕ್ತಿ ಅಡಗಿಸಲು ಪ್ರಯತ್ನಿಸುತ್ತಿದ್ದಾರೆ. ಇದ್ಯಾವುದೂ ಅವರ ಮುಂದೆ ನಡೆಯಲ್ಲ ಎಂದರು. ಇನ್ನು, ಅಬಕಾರಿ ಇಲಾಖೆಯಲ್ಲಿ ಯಾವುದೇ ವರ್ಗಾವಣೆಯಾಗಿಲ್ಲ. ಪ್ರೊಮೋಷನ್ ಕೊಡಲಾಗಿದೆ. ಹೊಸ ಲೈಸನ್ಸ್ ನೀಡುವ ಚಿಂತನೆಯನ್ನು ಸರ್ಕಾರ ತೆಗೆದುಕೊಂಡಿದೆ. ಈ ಬಗ್ಗೆ ಸಿಎಂ ಜೊತೆ ಚರ್ಚಿಸಿ ಮುಂದಿನ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದರು.