ನವದೆಹಲಿ: ರಾಜ್ಯಕ್ಕೆ ಅಕ್ಕಿ ಕೊಡಲು ಕೇಂದ್ರ ಸಿದ್ಧವಿದೆ. ಮನವಿ ಬಂದರೆ ಹೆಚ್ಚುವರಿ ಅಕ್ಕಿ ಕೊಡಲಿದ್ದೇವೆ. ಕೆಜಿಗೆ 28ರೂ.ನಂತೆ ನಾವು ಅಕ್ಕಿ ಕೊಡಲು ಸಿದ್ಧರಿದ್ದೇವೆ. ಎಷ್ಟು ಬೇಕಾದರೂ ಅಕ್ಕಿಕೊಡಲಿದ್ದೇವೆ ಎಂದು ಆಹಾರ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ. ದೆಹಲಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ರಾಜ್ಯಕ್ಕೆ ಅಕ್ಕಿ ಕೊಡಲು ಕೇಂದ್ರ ಸುತರಾಂ ಒಪ್ಪಿರಲಿಲ್ಲ.
Advertisement
ಇರುವ ಸ್ಟಾಕನ್ನೆಲ್ಲ ರಾಜ್ಯಕ್ಕೆ ಮಾರಾಟ ಮಾಡಿ ಖಾಲಿ ಮಾಡಿದರೆ ತುರ್ತು ಸಂದರ್ಭಗಳಲ್ಲಿ ವಿತರಣೆ ಮಾಡಲು ಕಷ್ಟ ಎಂಬುದು ಕೇಂದ್ರದ ವಾದವಾಗಿತ್ತು. ಇದೀಗ ರಾಜ್ಯಕ್ಕೆ ಅಕ್ಕಿಕೊಡಲು ಕೇಂದ್ರ ಸಿದ್ಧವಿದೆ. ಮನವಿ ಬಂದರೆ ಹೆಚ್ಚುವರಿ ಅಕ್ಕಿ ಕೊಡಲಿದ್ದೇವೆ. ಕೆಜಿಗೆ 28ರೂ.ನಂತೆ ನಾವು ಅಕ್ಕಿ ಕೊಡಲು ಸಿದ್ಧರಿದ್ದೇವೆ. ಎಷ್ಟು ಬೇಕಾದರೂ ಅಕ್ಕಿ ಕೊಡಲಿದ್ದೇವೆ ಎಂದು ಹೇಳಿದ್ದಾರೆ.