ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2025-26ನೇ ಸಾಲಿನ ಕೇಂದ್ರ ಬಜೆಟ್ ಅನ್ನು ಲೋಕಸಭೆಯಲ್ಲಿ ಮಂಡಿಸುತ್ತಿದ್ದಾರೆ. ಎಸ್‌ಸಿ, ಎಸ್‌ಟಿ ಸಮುದಾಯದ ಉದ್ಯಮಿಗಳು ಹಾಗೂ ಮಹಿಳಾ ಉದ್ಯಮಿಗಳಿಗೆ ಹೊಸ ಯೋಜನೆಯನ್ನೂ ಘೋಷಣೆ ಮಾಡಲಾಗಿದೆ. ಮೊದಲ ಬಾರಿಗೆ ಉದ್ಯಮ ಆರಂಭಿಸುವ ಮಹಿಳೆಯರಿಗೆ ದೀರ್ಘಾವಧಿ ಸಾಲಗಳನ್ನು ನೀಡಲಾಗುತ್ತದೆ.
Advertisement
ಈ ಯೋಜನೆಯಲ್ಲಿ ಎಸ್‌ಸಿ, ಎಸ್‌ಟಿ ಉದ್ಯಮಿಗಳು ಹಾಗೂ ಮೊದಲ ಬಾರಿ ಉದ್ಯಮ ಆರಂಭಿಸುವ ಮಹಿಳೆಯರಿಗೆ 2 ಕೋಟಿ ರೂ.ಗಳವರೆಗೆ ಸಾಲವನ್ನು ಒದಗಿಸಲಾಗುತ್ತದೆ ಎಂದು ಘೋಷಣೆ ಮಾಡಿದರು. ಇದು ಮಧ್ಯಮ, ಸಣ್ಣ ಹಾಗೂ ಅತಿ ಸಣ್ಣ ಕೈಗಾರಿಕಾ ವಲಯ ಹೆಚ್ಚಿನ ಬೆಂಬಲ ನೀಡುತ್ತವೆ ಮತ್ತು ಉದ್ಯೋಗ ಸೃಷ್ಟಿಗೆ ಸಹಾಯ ಮಾಡುತ್ತದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.