ಹಾವೇರಿ: ಕೇಂದ್ರ ಸರ್ಕಾರ ನಮ್ಮ ಮೇಲೆ ಮಲತಾಯಿ ಧೋರಣೆ ತೋರಿಸುತ್ತಿದೆ ಎಂದು ಕಾಂಗ್ರೆಸ್ ಸರ್ಕಾರದ ಮುಖ್ಯ ಸಚೇತಕ ಸಲೀಂ ಅಹ್ಮದ್ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ನಮ್ಮ ಮೇಲೆ ಮಲತಾಯಿ ಧೋರಣೆ ತೋರಿಸುತ್ತಿದೆ.
ರಾಜ್ಯಕ್ಕೆ ಬರಬೇಕಾದ ಹಣವನ್ನು ಕೊಡಿಸಲು ಕೇಂದ್ರದ ಐದು ಮಂತ್ರಿಗಳು ಮತ್ತು ಸಂಸದರು ವಿಫಲವಾಗಿದ್ದಾರೆ. ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು 11 ವರ್ಷವಾಯ್ತು. ಪ್ರಧಾನಿ ನರೇಂದ್ರ ಮೋದಿ ಸುಳ್ಳು ಹೇಳುತ್ತಲೇ ಅಧಿಕಾರ ಮಾಡುತ್ತಿದ್ದಾರೆ. ಕೇಂದ್ರ ಸರ್ಕಾರದ ಆಡಳಿತದಿಂದ ಜನರು ಭ್ರಮನಿರಸನರಾಗಿದ್ದಾರೆ” ಎಂದು ದೂರಿದ್ದಾರೆ.
ಕೇಂದ್ರ ಸರ್ಕಾರ ಹೇಳಿದ್ದೇ ಒಂದು, ಮಾಡುತ್ತಿರುವುದೇ ಒಂದು. ಆದರೆ ಕರ್ನಾಟಕದಲ್ಲಿ ನಾವು ನುಡಿದಂತೆ ನಡೆದಿದ್ದೇವೆ. ನಮ್ಮ ಏಳಿಗೆಯನ್ನು ಬಿಜೆಪಿಯವರು ಸಹಿಸುತ್ತಿಲ್ಲ. ಅಗಸ್ಟ್ ತಿಂಗಳಲ್ಲಿ ವಿಧಾನಸಭೆ ಅಧಿವೇಶನ ನಡೆಯುತ್ತದೆ. ಅಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ಚರ್ಚಿಸುತ್ತೇವೆ ಎಂದರು.