ಬೆಳಗಾವಿ: ಬಾಂಗ್ಲಾದೇಶಕ್ಕೆ ತಕ್ಕ ಪಾಠ ಕಲಿಸುವ ಕೆಲಸವನ್ನು ಕೇಂದ್ರ ಸರ್ಕಾರ ಮಾಡಬೇಕು ಎಂದು ಹಿಂದು ಮುಖಂಡ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ಬೆಳಗಾವಿಯ ಹುಕ್ಕೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಾಂಗ್ಲಾದೇಶ ಹುಟ್ಟಿದೆ ಭಾರತದಿಂದ ಹೀಗಾಗಿ ಕೇಂದ್ರ ಸರ್ಕಾರ ಇದರ ಕುರಿತು ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಬೇಕು.
Advertisement
ಬಾಂಗ್ಲಾದೇಶಕ್ಕೆ ತಕ್ಕ ಪಾಠ ಕಲಿಸುವ ಕೆಲಸವನ್ನು ಕೇಂದ್ರ ಸರ್ಕಾರ ಮಾಡಬೇಕು. ಬಾಂಗ್ಲಾದೇಶದ ಹಿಂದೂಗಳ ರಕ್ಷಣೆಗೆ ಪ್ರಧಾನಿ ಮೋದಿ, ಗೃಹಮಂತ್ರಿ ಅಮಿತ್ ಷಾ ಮುಂದಾಗಬೇಕು ಹಾಗೂ ಕೇಂದ್ರ ಸರ್ಕಾರ ಇದರಲ್ಲಿ ಮಧ್ಯಪ್ರವೇಶಿಸಿ ಸ್ವಾಮೀಜಿಯನ್ನು ಆದಷ್ಟು ಬೇಗ ಬಂದ ಮುಕ್ತ ಮಾಡಬೇಕು ಎಂದು ಪ್ರಮೋದ್ ಮುತಾಲಿಕ್ ಹೇಳಿದರು.