ಮೈಸೂರು: ಖಾಸಗಿ ಫೈನಾನ್ಸ್’ಗಳ ಕಿರುಕುಳಕ್ಕೆ ಕಡಿವಾಣ ಹಾಕಲು ಕೇಂದ್ರ ಸರ್ಕಾರ ಬದ್ದವಾಗಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಮಹಿಳಾ ಸ್ವಸಹಾಯ ಸಂಘಗಳಿಗೆ ಖಾಸಗಿ ಫೈನಾನ್ಸ್‌ಗಳು ವಸೂಲಿ ಹೆಸರಲ್ಲಿ ಕಿರುಕುಳ ನೀಡುತ್ತಿರುವುದಕ್ಕೆ ಕಡಿವಾಣ ಹಾಕಲು ಕೇಂದ್ರ ಸರಕಾರ ಬದ್ಧವಾಗಿದೆ’ ಎಂದು ಭರವಸೆ ನೀಡಿದರು.
Advertisement
ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಮಾತನಾಡಿ, ‘ಕೇಂದ್ರ ಸರಕಾರ ಹನಿ ನೀರಾವರಿ ಕೊಳವೆಗಳು, ಕೀಟನಾಶಕಗಳು, ರಸಗೊಬ್ಬರಗಳ ಮೇಲೆ ಜಿಎಸ್‌ಟಿ ವಿಧಿಸಿದೆ.ಇದರಿಂದ ರೈತರಿಗೆ ಖರೀದಿ ಬೆಲೆ ಹೆಚ್ಚಾಗುತ್ತಿದೆ. ಹಲವು ವರ್ಷಗಳಿಂದ ಇದನ್ನು ರದ್ದು ಮಾಡಬೇಕೆಂದು ರಾಜ್ಯ ಹಾಗೂ ಕೇಂದ್ರ ಸರಕಾರಕ್ಕೆ ಅನೇಕ ಬಾರಿ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ. ಹಾಗಾಗಿ ಕೃಷಿ ಉಪಕರಣಗಳ ಖರೀದಿಯ ಮೇಲೆ ಜಿಎಸ್‌ಟಿ ರದ್ದು ಮಾಡಬೇಕು ಎಂದು ಕೋರಿದರು.