ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಕೇಂದ್ರ ಪುನರ್‌ ವಿಮರ್ಶೆ ಮಾಡಬೇಕು –ಸಚಿವ ಎಂ.ಸಿ.ಸುಧಾಕರ್

0
Spread the love

ಬೆಂಗಳೂರು:-ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಕೇಂದ್ರ ಪುನರ್‌ ವಿಮರ್ಶೆ ಮಾಡಬೇಕು ಎಂದು ಸಚಿವ ಎಂ.ಸಿ.ಸುಧಾಕರ್ ಮನವಿ ಮಾಡಿದ್ದಾರೆ.

Advertisement

ಈ ಸಂಬಂಧ ಮಾತನಾಡಿದ ಅವರು, ರಾಷ್ಟ್ರೀಯ ಶಿಕ್ಷಣ ನೀತಿ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಮಾತ್ರ ಹೇಳಿಮಾಡಿಸಿದಂತಿದ್ದು, ಸರ್ಕಾರಿ ಶಿಕ್ಷಣ ಸಂಸ್ಥೆಗಳಿಗೆ ಸರಿಯಾದುದ್ದಲ್ಲ, ಶಿಕ್ಷಣಕ್ಕಿಂತ ಸಮಸ್ಯೆಗಳಿಗೆ ಹೆಚ್ಚು ದಾರಿ ಮಾಡಿಕೊಡಲಿದೆ ಎಂದರು.

ರಾಷ್ಟ್ರೀಯ ಶಿಕ್ಷಣ ನೀತಿಯಡಿ ಬಹುಶಿಸ್ತೀಯ, ಬಹು ಆಯ್ಕೆಯ, ಮುಕ್ತ ಶಿಕ್ಷಣಕ್ಕೆ ಆದ್ಯತೆ ನೀಡಲಾಗಿದೆ. ಈ ಶಿಕ್ಷಣ ನೀತಿ ಒಂದೇ ಸೂರಿನಡಿ ಎಲ್ಲಾ ವಿಭಾಗಗಳನ್ನು ಹೊಂದಿರುವ ಖಾಸಗಿ ವಿಶ್ವವಿದ್ಯಾಲಯ ಅಥವಾ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಸರಿಯಾಗಿರಬಹುದು. ಆದರೆ ಕೃಷಿ, ಕಾನೂನು, ಇಂಜಿನಿಯರಿಂಗ್, ವೈದ್ಯಕೀಯ ಎಂದೂ ಹಂಚಿಹೋಗಿರುವ ಸರ್ಕಾರಿ ವಿಶ್ವವಿದ್ಯಾಲಯದಲ್ಲಿ ಅಸಾಧ್ಯವಾಗಿದೆ ಎಂದರು.

ಕಲಾ ವಿಭಾಗದಲ್ಲಿ ಓದುವ ವಿದ್ಯಾರ್ಥಿ ವಿಜ್ಞಾನ ಓದಲು ಬಯಸಿದರೆ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಅವಕಾಶ ನೀಡಲಾಗಿದೆ. ಆದರೆ ಸೂಕ್ತ ಶಿಕ್ಷಣ ನೀಡುವ ಅಧ್ಯಾಪಕರ ಕೊರತೆಯ ಬಗ್ಗೆ ಚಿಂತನೆ ನಡೆಸಿಲ್ಲ. ಕರ್ನಾಟಕದ ಅನೇಕ ಕಾಲೇಜು, ವಿಶ್ವವಿದ್ಯಾಲಯಗಳಲ್ಲಿ ಶಿಕ್ಷಕರ ಕೊರತೆಯಿದೆ. 14 ಸಾವಿರ ಅತಿಥಿ ಉಪನ್ಯಾಸಕರು ಕಾರ್ಯ ನಿರ್ವಹಿಸುತ್ತಿದ್ದರೂ ಕೊರತೆ ಮಾತ್ರ ನೀಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here