ನವದೆಹಲಿ: ಕರ್ನಾಟಕದ ಯಲ್ಲಾಪುರ ಹಾಗೂ ಸಿಂಧನೂರಿನಲ್ಲಿ ಸಂಭವಿಸಿದ ರಸ್ತೆ ಅಪಘಾತಗಳಲ್ಲಿ ಮೃತಪಟ್ಟವರ ಕುಟುಂಬದವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಲಾ 3 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದರು.
ಇದೀಗ ಈ ಘಟನೆಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದು, ಜೊತೆಗೆ ಮೃತಪಟ್ಟವರ ಕುಟುಂಬಸ್ಥರಿಗೆ 2 ಲಕ್ಷ ರೂ. ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ. ಕರ್ನಾಟಕ ಸರ್ಕಾರದಿಂದ ಈಗಾಗಲೇ 3 ಲಕ್ಷ ರೂ. ಪರಿಹಾರ ಮೊತ್ತ ಘೋಷಿಸಲಾಗಿದೆ.
ಕರ್ನಾಟಕದ ಉತ್ತರ ಕನ್ನಡ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಜೀವಹಾನಿಯಿಂದ ತೀವ್ರ ದುಃಖಿತನಾಗಿದ್ದೇನೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ ಸೂಚಿಸುತ್ತೇನೆ. ಗಾಯಾಳುಗಳು ಬೇಗ ಗುಣಮುಖರಾಗಲಿ.
ಸ್ಥಳೀಯ ಆಡಳಿತವು ಸಂತ್ರಸ್ತರಿಗೆ ಸಹಾಯ ಮಾಡುತ್ತಿದೆ ಎಂದು ಮೋದಿ ಅವರು ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ. ಹಾಗೇ, ಮೃತರ ಪ್ರತಿ ಕುಟುಂಬಕ್ಕೂ PMNRF ನಿಂದ 2 ಲಕ್ಷ ರೂ. ಪರಿಹಾರ ನೀಡಲಾಗುವುದು. ಗಾಯಾಳುಗಳಿಗೆ 50,000 ರೂ. ನೀಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದ್ದಾರೆ.