ವಿವಿಧ ಗ್ರಾಮಗಳಿಗೆ ಸಿಇಓ ಭರತ್ ಎಸ್ ಭೇಟಿ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ: ಗದಗ ಜಿಲ್ಲಾ ಪಂಚಾಯಿತಿ ಸಿಇಒ ಭರತ್ ಎಸ್ ಅವರು ರೋಣ ತಾಲೂಕಿನ ಬಾಸಾಲಪೂರ, ಹಿರೇಮಣ್ಣೂರ, ಸಂದಿಗವಾಡ ಹಾಗೂ ಡ.ಸ.ಹಡಗಲಿ ಗ್ರಾಮಗಳಿಗೆ ಮಂಗಳವಾರ ಭೇಟಿ ನೀಡಿ, ಜಲ ಜೀವನ್ ಮಿಷನ್ (ಜೆಜೆಎಂ) ಹಾಗೂ ಬಹು ಗ್ರಾಮ ಕುಡಿಯುವ ನೀರು ಯೋಜನೆಯ ಕಾಮಗಾರಿಗಳನ್ನು ಪರಿಶೀಲಿಸಿದರು.

Advertisement

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವರ ಸೂಚನೆಯಂತೆ, ಜಲ ಜೀವನ್ ಮಿಷನ್ ಯೋಜನೆಯಡಿ ಪೂರ್ಣಗೊಂಡ ಕಾಮಗಾರಿಗಳನ್ನು ಪರಿಶೀಲಿಸಿ ವರದಿ ಸಲ್ಲಿಸುವ ಜವಾಬ್ದಾರಿಯನ್ನು ಸಿಇಒ ಭರತ್ ಎಸ್ ತೆಗೆದುಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ, ರೋಣ ತಾಲೂಕಿನ ಆಯ್ದ ಗ್ರಾಮಗಳಿಗೆ ಅನಿರೀಕ್ಷಿತ ಭೇಟಿ ನೀಡಿ, ಜೆಜೆಎಂ ಕಾಮಗಾರಿಗಳು, ಸಂಪರ್ಕಗಳ ಗುಣಮಟ್ಟ, ಮೀಟರ್ ಅಳವಡಿಕೆ, ರಸ್ತೆ ಪುನಶ್ಚೇತನ, ನೀರಿನ ಗುಣಮಟ್ಟ, ಗ್ರಾಮ ನೀರು ಮತ್ತು ನೈರ್ಮಲ್ಯ ಸಮಿತಿಗಳ ಕಾರ್ಯ ನಿರ್ವಹಣೆ ಕುರಿತು ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ರೋಣ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ ಬಿ ಕಂದಕೂರ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಪ್ರಭಾರ ಕಾರ್ಯಪಾಲಕ ಇಂಜಿನಿಯರ್ ರಾಘವೇಂದ್ರ ದೊಡ್ಡಮನಿ, ಸಹಾಯಕ ಇಂಜಿನಿಯರ್ ಮಹದೇವಪ್ಪ ಹೊಸಮನಿ, ಪವನ ಪವಾರ, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಚಂದ್ರಕಾಂತ ನರ್ಲೆಕರ, ಸಹಾಯಕ ಇಂಜಿನಿಯರ್ ಶರಣಬಸವ ಎಸ್.ಎಸ್, ಗ್ರಾ.ಪಂ ಅಧ್ಯಕ್ಷರು, ಸದಸ್ಯರು, ಅಭಿವೃದ್ಧಿ ಅಧಿಕಾರಿಗಳು ಮತ್ತು ಕಾರ್ಯದರ್ಶಿಗಳು ಉಪಸ್ಥಿತರಿದ್ದರು.


Spread the love

LEAVE A REPLY

Please enter your comment!
Please enter your name here