ಕಾರ್ಮಿಕರ ಸೇವೆಗೆ ಸರ್ಕಾರ ಸದಾ ಸಿದ್ಧ : ಕೃಷ್ಣಗೌಡ ಎಚ್.ಪಾಟೀಲ

0
Ceremony honoring children of construction workers
Spread the love

ವಿಜಯಸಾಕ್ಷಿ ಸುದ್ದಿ, ಗದಗ : ಕಟ್ಟಡ ಕಾರ್ಮಿಕರ ಮಕ್ಕಳು ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಅತ್ಯುನ್ನತ ಶ್ರೇಣಿ ಪಡೆದಿರುವುದು ಶ್ಲಾಘನೀಯ. ಇಲ್ಲಿ ಯಶಸ್ಸು ಸಾಧಿಸಿದರೆ ಮುಂದೆ ಸುಲಭವಾಗಿ ಗುರಿ ಮುಟ್ಟಬಹುದು ಎಂದು ಕಾಂಗ್ರೆಸ್ ಯುವ ಪ್ರದಾನ ಕಾರ್ಯದರ್ಶಿ ಕೃಷ್ಣಗೌಡ ಎಚ್.ಪಾಟೀಲ ಅಭಿಪ್ರಾಯಪಟ್ಟರು.

Advertisement

ಅವರು ನಗರದಲ್ಲಿ ಕಾರ್ಮಿಕ ಕಲ್ಯಾಣ ಸಂಸ್ಥೆಯ ಗದಗ ಜಿಲ್ಲಾ ಕಟ್ಟಡ ನಿರ್ಮಾಣ ಕಾರ್ಮಿಕರ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ರಾಜ್ಯ ಪ್ರಶಸ್ತಿ ಪುರಸ್ಕೃತ ಪತ್ರಕರ್ತರಿಗೆ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಿಗೆ ಹಾಗೂ ಜಿಲ್ಲೆಯ ಪ್ರತಿಭಾವಂತ ವಿದ್ಯಾರ್ಥಿಗಳ ಸನ್ಮಾನ ಸಮಾರಂಭ ಉದ್ಘಾಟಿಸಿ ಮಾತನಾಡಿ, ಪ್ರತಿಭಾ ಪುರಸ್ಕಾರಗಳು ವಿದ್ಯಾರ್ಥಿಗಳ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸುತ್ತವೆ. ಇತರೆ ವಿದ್ಯಾರ್ಥಿಗಳಿಗೆ ಇದು ಪ್ರೇರಣೆಯಾಗುತ್ತದೆ. ಕೇವಲ ಅಂಕ ಗಳಿಸುವದು ಮುಖ್ಯವಲ್ಲ, ಕೌಶಲ್ಯ ಮತ್ತು ಉತ್ತಮ ಸಂವಹನ ಕೌಶಲ್ಯ ಹೊಂದಬೇಕು. ಕಾರ್ಮಿಕರ ಕಲ್ಯಾಣಕ್ಕಾಗಿ ಕಾರ್ಮಿಕರ ಹಿತ ಕಾಪಾಡಲು ಹಾಗೂ ಅವರ ಸೇವೆಗೆ ನಮ್ಮ ಸರ್ಕಾರ ಸದಾ ಸಿದ್ಧ ಎಂದರು.

ಸನ್ಮಾನ ಸ್ವೀಕರಿಸಿ ಪ್ರತಿಭಾವಂತ ವಿದ್ಯಾರ್ಥಿ ಸಮೃದ್ಧಿ ಶ್ರೀಧರ ಸಿದ್ದಲಿಂಗ ಮಾತನಾಡಿ, ವಿದ್ಯಾರ್ಥಿ ಜೀವನ ಬಹು ಮುಖ್ಯವಾಗಿದೆ. ಸಾಧನೆಗೆ ನಿರಂತರ ಶ್ರಮ ಮುಖ್ಯವಾಗಿದ್ದು, ನನ್ನ ಸಾಧನೆಗೆ ನನ್ನ ಶಿಕ್ಷಕರು ಮತ್ತು ತಂದೆ-ತಾಯಿ ಕಾರಣ ಎಂದರು.

ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಜಿ, ರಾಜ್ಯ ಪ್ರಶಸ್ತಿ ಪುರಸ್ಕೃತ ಜಿಲ್ಲಾ ವರದಿಗಾರ ವೆಂಕಟೇಶ ಇಮ್ರಾಪುರ, ಮಾಳಿಂಗರಾಯ ಪೂಜಾರ ಸೇರಿದಂತೆ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಈ ವೇಳೆ ಕಾರ್ಮಿಕ ಕಲ್ಯಾಣ ಸಂಸ್ಥೆ ಅಧ್ಯಕ್ಷ ಮಹಮ್ಮದ್ ಇರ್ಫಾನ್ ಡಂಬಳ, ಗೀತಾ ಹಬೀಬ್, ಕಟ್ಟಡ ಕಾರ್ಮಿಕರ ಮಹಾಸಂಘದ ಮೆಹಬೂಬಖಾನ್ ಪಠಾಣ, ಝಡ್.ಡಿ. ಬೇಲೇರಿ, ಶಂಕರಗೌಡ ಭರಮಗೌಡ್ರ, ಚನ್ನವೀರಗೌಡ ಪಾಟೀಲ್, ಜಾಕಿರ ಕಲಬುರ್ಗಿ ಮುಂತಾದವರು ಉಪಸ್ಥಿತರಿದ್ದರು. ನಾಸೀರ್ ಚಿಕೇನಕೊಪ್ಪ ಕಾರ್ಯಕ್ರಮ ನಿರ್ವಹಿಸಿದರು.

ನಗರಾಭಿವೃದ್ಧಿ ಪ್ರಾಧಿಕಾರದ ನಿರ್ದೇಶಕ ಬಸವರಾಜ ಕಡೆಮನಿ ಮಾತನಾಡಿ, ಪ್ರತಿಯೊಬ್ಬ ಮಕ್ಕಳಲ್ಲೂ ಒಂದೊಂದು ಪ್ರತಿಭೆ ಇರುತ್ತದೆ. ಮಕ್ಕಳಲ್ಲಿರುವ ಪ್ರತಿಭೆಯನ್ನು ಪೋಷಕರು ಹಾಗೂ ಶಿಕ್ಷಕರು ಗುರುತಿಸಿ ಪ್ರೋತ್ಸಾಹಿಸಬೇಕು. ಆಗ ಇನ್ನಷ್ಟು ಸಾಧನೆ ಮಾಡಲು ಸಾಧ್ಯವಾಗುತ್ತದೆ. ಕಲಿತು ಉದ್ಯೋಗ ಪಡೆಯುವ ಪ್ರಯತ್ನ ಮಾಡುವುದಕ್ಕಿಂತ ಉದ್ಯೋಗ ಸೃಷ್ಟಿ ಮಾಡಬೇಕು ಎಂದರು.


Spread the love

LEAVE A REPLY

Please enter your comment!
Please enter your name here