ಜನಿವಾರ ಧರಿಸಿದ್ದಕ್ಕೆ ಸಿಇಟಿ ಪರೀಕ್ಷೆ ನಿರಾಕರಣೆ ಪ್ರಕರಣ: ಡಿ.ಸಿ ವರದಿ ಕೇಳಿದ ಕೆಇಎ!

0
Spread the love

ಬೆಂಗಳೂರು:- ಬೀದರ್ ಹಾಗೂ ಶಿವಮೊಗ್ಗದಲ್ಲಿ ನಡೆದ ಜನಿವಾರ ವಿವಾದ ಪ್ರಕರಣವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಗಂಭೀರವಾಗಿ ಪರಿಗಣಿಸಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸುವ ಎಚ್ಚರಿಕೆ ನೀಡಿದೆ.

Advertisement

ಪ್ರಕರಣ ಬೆಳಕಿಗೆ ಬಂದ ತಕ್ಷಣವೇ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್‌.ಪ್ರಸನ್ನ ಅವರು ಎರಡೂ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಇಂದು ಪತ್ರ ಬರೆದು, ಸಮಗ್ರ ವರದಿ ನೀಡುವಂತೆ ಸೂಚಿಸಿದ್ದಾರೆ. ವಸ್ತ್ರ ಸಂಹಿತೆಯಲ್ಲಿ ಎಲ್ಲಿಯೂ ಜನಿವಾರ ತೆಗೆಸಬೇಕೆಂದು ಹೇಳಿರಲಿಲ್ಲ. ಆದರೂ ಎರಡು ಕೇಂದ್ರಗಳಲ್ಲಿ ಈ ರೀತಿಯ ಅಧಿಕ ಪ್ರಸಂಗ ಮಾಡಿರುವುದು ಖಂಡನೀಯ. ಈ ಬಗ್ಗೆ ಸಮಗ್ರ ತನಿಖೆ ನಡೆಸಲಾಗುವುದು ಎಂದು ಅವರು ಎಚ್ಚರಿಸಿದ್ದಾರೆ.

ಜಿಲ್ಲಾ ಮಟ್ಟದಲ್ಲಿ ಸಿಇಟಿ ನಡೆಸುವ ಸಂಪೂರ್ಣ ಜವಾಬ್ದಾರಿ ಆಯಾ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳದ್ದಾಗಿರುತ್ತದೆ. ಯಾವ ರೀತಿ ಮಾಡಬೇಕು, ಯಾವುದಕ್ಕೆಲ್ಲ ನಿಷೇಧ ಇತ್ಯಾದಿ ವಿಷಯಗಳ ಬಗ್ಗೆ ಮೊದಲೇ ತರಬೇತಿ ಕೂಡ ನೀಡಲಾಗಿರುತ್ತದೆ. ಜತೆಗೆ ಲಿಖಿತವಾಗಿಯೂ ತಿಳಿಸಲಾಗುತ್ತದೆ. ಆದರೂ ಈ ರೀತಿ ಮಾಡಿರುವುದು ನೋವಿನ ಸಂಗತಿ. ಯಾವುದೇ ಧರ್ಮ/ಜಾತಿಯವರಿಗೆ ಘಾಸಿಯಾಗುವ ಯಾವ ತೀರ್ಮಾನವನ್ನೂ ಕೆಇಎ ಕೈಗೊಳ್ಳುವುದಿಲ್ಲ. ನಮ್ಮದೇನಿದ್ದರೂ ವಿದ್ಯಾರ್ಥಿ ಕೇಂದ್ರಿತ ತೀರ್ಮಾನ ಎಂದು ಸ್ಪಷ್ಟಪಡಿಸಿದ್ದಾರೆ.

ಘಟನೆ ಹಿನ್ನೆಲೆ:-

ಕರ್ನಾಟಕ ಜನಿವಾರ ವಿವಾದ: ವೃತ್ತಿಪರ ಕೋರ್ಸ್‌ಗಳ ಆಯ್ಕೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಸಿಇಟಿ ಪರೀಕ್ಷೆ ಈಗ ವಿವಾದದ ಕೇಂದ್ರ ಬಿಂದುವಾಗಿದೆ. ಇದಕ್ಕೆ ಕಾರಣ, ಶಿವಮೊಗ್ಗ ಹಾಗೂ ಬೀದರ್​​ನಲ್ಲಿ ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರ ತೆಗೆಸಿರುವುದು. ಶಿವಮೊಗ್ಗದಲ್ಲಿ ವಿದ್ಯಾರ್ಥಿಯ ಜನಿವಾರ ತುಂಡರಿಸಿ ಕಸದ ಬುಟ್ಟಿಗೆ ಎಸೆಯಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಬೀದರ್​​​ನಲ್ಲಿ ಜನಿವಾರ ಧರಿಸಿದ ವಿದ್ಯಾರ್ಥಿಗೆ ಪರೀಕ್ಷೆ ಬರೆಯಲು ಅವಕಾಶ ಕೊಟ್ಟಿಲ್ಲ. ಸದ್ಯ, ರಾಜಕೀಯವಾಗಿಯೂ ಸದ್ದು ಮಾಡಲಾರಂಭಿಸಿದೆ.


Spread the love

LEAVE A REPLY

Please enter your comment!
Please enter your name here