ಚನ್ನಪಟ್ಟಣ:- ವರ್ಗಾವಣೆ ದಂಧೆ ವಿಚಾರವಾಗಿ ಚಲುವರಾಯಸ್ವಾಮಿ ಮೇಲೆ ಹಲ್ಲೆ ನಡೆದಿದೆ ಎಂದು ಹೆಚ್ ಡಿ ಕುಮಾರಸ್ವಾಮಿ ಆರೋಪ ಮಾಡಿದ್ದಾರೆ.
ಈ ಸಂಬಂಧ ಮಾತನಾಡಿದ್ದ ಕುಮಾರಸ್ವಾಮಿ, ಸಚಿವ ಎನ್. ಚಲುವರಾಯಸ್ವಾಮಿ ಸೇರಿದಂತೆ ಕೆಲವರು ವರ್ಗಾವಣೆ ದಂಧೆ ವಿಚಾರವಾಗಿ ಮೈಸೂರಿನಲ್ಲಿ ಹೊಡೆದಾಡಿಕೊಂಡಿದ್ದಾರೆ ಎಂಬ ಮಾಹಿತಿ ಇದೆ. ಇನ್ನೂ ಸ್ಪಷ್ಟವಾಗಿ ಹೇಳುವುದಾದರೆ ಹಣ ಹಂಚಿಕೆ ವಿಚಾರಕ್ಕೆ ಕಿತ್ತಾಡಿಕೊಂಡಿದ್ದಾರೆ’ ಎಂದರು.
ರಾಜ್ಯದ ಒಬ್ಬ ಮಂತ್ರಿಯನ್ನು ಬಹಿರಂಗವಾಗಿ ಹೊಡೆಯುತ್ತಾರೆ ಎಂದರೆ ಈ ರಾಜ್ಯ ಎಲ್ಲಿಗೆ ಬಂದಿದೆ ಎಂಬುದನ್ನು ಗಮನಿಸಬೇಕು’ ಎಂದರು.
ಇನ್ನೂ ಆರೋಪವನ್ನು ಸಚಿವ ಚಲುವರಾಯಸ್ವಾಮಿ ತಳ್ಳಿ ಹಾಕಿದ್ದಾರೆ. ನಾನು ಎಂಗೇಜ್ಮೆಂಟ್ ಹೋಗಿದ್ದೆ. ಅಲ್ಲೇನು ಗಲಾಟೆ ನಡೆದಿಲ್ಲ, ಜಯರಾಮ್ ಗೆ ನೀವು ಕೇಳಿ. ಅಂಥಾದ್ದೇನು ನಡೆದಿಲ್ಲ, ವರ್ಗಾವಣೆ ವಿಚಾರ ಇಟ್ಟುಕೊಂಡು ಅವರು ಬಂದಿಲ್ಲ. ಚಪಲಕ್ಕೆ ಹೇಳುತ್ತಾರೋ ಗೊತ್ತಿಲ್ಲ ಎಂದು ಎಚ್ಡಿಕೆಗೆ ಟಾಂಗ್ ಕೊಟ್ಟರು.
ಅದೇನಾದ್ರೂ ಇದ್ದರೆ ಕುಮಾರಸ್ವಾಮಿ ಹಾಕೋದಕ್ಕೆ ಹೇಳಿ. ಚಪಲಕ್ಕೆ ಹೇಳ್ತಾರೋ ಗೊತ್ತಿಲ್ಲ. ಸಿದ್ದಲಿಂಗೇಗೌಡ ದುಡ್ಡಿನ ವಿಚಾರ ಹೇಳೋದಕ್ಕೆ ಹೇಳಿ ಮೊದಲು. ಕುಮಾರಸ್ವಾಮಿ ತನ್ನ ಮಗನ ಚುನಾವಣೆ ನಿಲ್ಲಿಸಿದ್ರೂ ಚುನಾವಣೆ ಬಿಟ್ಟು ಚೆಲುವರಾಯಸ್ವಾಮಿ ಮೇಲೆ ಅವರ ಗಮನ. ಡಿಕೆ ಶಿವಕುಮಾರ್ ಹೇಳಿದಂಗೆ ಬೆಳಗೆದ್ದರೆ ಮಲಗಿದ್ದರೆ ಮಾತಾಡದೇ ಹೋದ್ರೆ ನಿದ್ದೆ ಬರಲ್ಲ ಅಂದಂಗೆ ನನ್ನ ಹೆಸರು ತೆಗೆದುಕೊಳ್ಳುತ್ತಾರೆ ಎಂದು ಕುಮಾರಸ್ವಾಮಿ ವಿರುದ್ಧ ಕಿಡಿಕಾರಿದರು.
ಘಟನೆ ವಿವರ:-
ವರ್ಗಾವಣೆ ಹಣ ಹಂಚಿಕೆ ಮಾಡುವ ವಿಚಾರಕ್ಕೆ ಚಲುವರಾಯಸ್ವಾಮಿ ಮೇಲೆ ಹಲ್ಲೆ ನಡೆದಿದೆ ಎಂದು ಕೇಂದ್ರ ಸಚಿವ ಎಚ್ಡಿ ಕುಮಾರಸ್ವಾಮಿ ಆರೋಪ ಮಾಡಿದ್ದಾರೆ. ಸಚಿವ ಚಲುವರಾಯಸ್ವಾಮಿ ಹಾಗೂ ಕಾಂಗ್ರೆಸ್ ಮುಖಂಡ ಕೀಲಾರಿ ಜಯರಾಮ ನಡುವೆ ಗಲಾಟೆ ವಿಚಾರ ಭಾರೀ ಚರ್ಚೆಗೆ ಗ್ರಾಸವಾಗಿದೆ.