ಚಾಮರಾಜನಗರ:– ಬೈಕ್ ಡಿಕ್ಕಿ ಹೊಡೆದು ಪಾದಚಾರಿ ಮಹಿಳೆ ದುರ್ಮರಣ ಹೊಂದಿದ ಘಟನೆ ಬೇಗೂರು ಗ್ರಾಮದ ರಾಷ್ಟ್ರೀಯ ಹೆದ್ದಾರಿ 766 ರಲ್ಲಿ ಜರುಗಿದೆ.
Advertisement
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬೇಗೂರು ಗ್ರಾಮದ ಹಳೆಯ ಪೊಲೀಸ್ ಠಾಣೆಯ ಸಮೀಪ ರಸ್ತೆ ದಾಟುತ್ತಿದ್ದ ಗ್ರಾಮದ ಸಣ್ಣಮ್ಮ ಎಂಬುವವರು ಬೈಕ್ ಡಿಕ್ಕಿ ಹೊಡೆದು ಸಾವನ್ನಪ್ಪಿದ್ದಾರೆ.
ಮೈಸೂರು ಕಡೆಯಿಂದ ಬಂದ ಬೈಕ್ ಡಿಕ್ಕಿ ಹೊಡೆದ ಕಾರಣ ಸಣ್ಣಮ್ಮ ರಸ್ತೆಯಲ್ಲಿ ಬಿದ್ದು ಗಾಯಗೊಂಡಿದ್ರು. ಈ ವೇಳೆ ಬೇಗೂರು ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು ಚಿಕಿತ್ಸೆ ಫಲಕಾರಿಯಾದ ಸಾವಿಗೀಡಾಗಿದ್ದಾರೆ ಎಂದು ತಿಳಿದುಬಂದಿದೆ.
ಇನ್ನುಅಪಘಾತ ಮಾಡಿದ ಬೈಕ್ ಸವಾರ ಪರಾರಿಯಾಗಿದ್ದು ಈ ಬಗ್ಗೆ ಬೇಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


