ಚಾಮರಾಜನಗರ:- ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ಕೃಷಿ ಹೊಂಡದಲ್ಲಿ ಮಹಿಳೆ ಮತ್ತು ಪುರುಷನ ಶವ ಪತ್ತೆಯಾಗಿರುವ ಘಟನೆ ಜರುಗಿದೆ.
ಮೀನಾಕ್ಷಿ (38) ಹಾಗೂ ರವಿ (40) ಎಂಬವರು ಮೃತದೇಹ ಪತ್ತೆಯಾಗಿದೆ. ಇವರು ಗುಳ್ಯದ ಬಯಲು ಬಳಿ ಒಡೆಯರಪಾಳ್ಯ ನಿವಾಸಿಗಳು ಎನ್ನಲಾಗಿದೆ. ಸ್ಥಳಕ್ಕೆ ಹನೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಹನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಅಕ್ರಮ ಸಂಬಂಧದ ಹಿನ್ನೆಲೆಯಲ್ಲಿ ಕೊಲೆ ಅಥವಾ ಆತ್ಮಹತ್ಯೆ ಶಂಕೆ ವ್ಯಕ್ತವಾಗಿದೆ.



