ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಪಡಗೂರು ಬಳಿ ಅಕ್ರಮ ವಿದ್ಯುತ್ ತಂತಿ ಸ್ಪರ್ಶಿಸಿ ಸುಮಾರು ಎರಡು ವರ್ಷದ ಹುಲಿ ಸಾವನ್ನಪ್ಪಿದ ಘಟನೆ ನಡೆದಿದೆ.
ಕೇರಳ ಮೂಲದ ಜಮೀನಿಗೆ ಅಳವಡಿಸಿದ್ದ ವಿದ್ಯುತ್ ತಂತಿಯನ್ನು ಸ್ಪರ್ಶಿಸಿ ದುರಂತ ಸಂಭವಿಸಿದೆ. ಸ್ಥಳಕ್ಕೆ ಪೊಲೀಸ್, ಅರಣ್ಯ ಮತ್ತು ಸೆಸ್ಕ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಭಾಗದಲ್ಲಿ ಹುಲಿ ಮತ್ತು ಚಿರತೆ ಸಂಚಾರ ಹೆಚ್ಚಾಗಿದ್ದು, ಅಧಿಕಾರಿಗಳು ಥರ್ಮಲ್ ಡ್ರೋನ್ ಮೂಲಕ ಪರಿಶೀಲನೆ ನಡೆಸಿದಾಗ ಹುಲಿ ಸಾವಿಗೀಡಾಗಿದೆ ಎಂಬುದು ದೃಢಪಟ್ಟಿದೆ. ಹಿಂದೆ ಮಲೆ ಮಹದೇಶ್ವರ ವನ್ಯಧಾಮದಲ್ಲಿ 6 ಹುಲಿ, ಬಿಆರ್‌ಟಿ ಸಂರಕ್ಷಿತಾರಣ್ಯ ವ್ಯಾಪ್ತಿಯಲ್ಲಿ 1 ಹುಲಿ ಸಾವನ್ನಪ್ಪಿದ್ದರೆ, ಇದೀಗ ಗುಂಡ್ಲುಪೇಟೆ ಭಾಗದಲ್ಲಿ ಸಹಜವಾಗಿ ಹುಲಿ ಸಾವಿಗೀಡಾಗಿದೆ.



