ಚಾಮರಾಜನಗರ: ಅಪಘಾತ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ 16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಅಪರಾಧಿಯನ್ನು ಬಂಧಿಸುವಲ್ಲಿ ಕೊನೆಗೂ ಪೊಲೀಸರು ಯಶಸ್ವಿಯಾಗಿದ್ದಾರೆ.
ಚಾಮರಾಜನಗರ ಗ್ರಾಮಾಂತರ ಪೊಲೀಸರು ಕಾರ್ಯಾಚರಣೆ ನಡೆಸಿ ನಂಜನಗೂಡು ಪಟ್ಟಣದ ನೀಲಕಂಠ ನಗರ ನಿವಾಸಿ ಸಫಿ ಬಿನ್ ಸೈಯದ್ ಮಹಮ್ಮದ್ ಎಂಬ ಆಟೋ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ. ಅಪಘಾತ ಪ್ರಕರಣದಲ್ಲಿ 2010ರಲ್ಲಿ ಚಾಮರಾಜನಗರ ಜೆಎಂಎಫ್ಸಿ ನ್ಯಾಯಾಲಯ ಒಂದು ವರ್ಷದ ಜೈಲು ಶಿಕ್ಷೆ ವಿಧಿಸಿತ್ತು. ಆದರೆ ಆರೋಪಿ ನ್ಯಾಯಾಲಯಕ್ಕೂ ಹಾಜರಾಗದೇ ಕಳೆದ 16 ವರ್ಷಗಳಿಂದ ತಲೆಮರೆಸಿಕೊಂಡಿದ್ದನು.
ಇದೀಗ ಆರೋಪಿಯನ್ನು ಬಂಧಿಸಿರುವ ಪೊಲೀಸರು, ಬಂಧಿತನನ್ನು ನ್ಯಾಯಾಲಯದ ಆದೇಶದಂತೆ ಜೈಲಿಗೆ ಕಳುಹಿಸಲಾಗಿದೆ.



