ಭಾರೀ ಮಳೆ ಕಾರಣ ಚಾಂಪಿಯನ್ ಟ್ರೋಫಿಯಲ್ಲಿ ಇಂದು ನಡೆಯಬೇಕಿದ್ದ ಆಸ್ಟ್ರೇಲಿಯಾ, ಆಫ್ರಿಕಾ ಪಂದ್ಯ ರದ್ದಾಗಿದೆ. ಟಾಸ್ ಹಾಕಲು ಮಳೆ ಅವಕಾಶ ನೀಡಲಿಲ್ಲ. ಮೂರು ಗಂಟೆಗಳಿಗೂ ಹೆಚ್ಚು ಕಾಲ ವಾತಾವರಣದಲ್ಲಿ ಬದಲಾವಣೆಯಾಗದ ಕಾರಣ ಪಂದ್ಯವನ್ನು ಅಂತಿಮವಾಗಿ ರದ್ದುಗೊಳಿಸಲಾಯಿತು.
Advertisement
ರದ್ದಾಗಿದ್ದರಿಂದ ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ತಂಡಗಳಿಗೆ ತಲಾ ಒಂದೊಂದು ಅಂಕ ನೀಡಲಾಯಿತು. ಬುಧವಾರ ಇಂಗ್ಲೆಂಡ್ ಮತ್ತು ಅಫ್ಘಾನಿಸ್ತಾನ ಮಧ್ಯೆ ಪಂದ್ಯ ನಡೆಯಲಿದೆ. ಈ ಪಂದ್ಯದಲ್ಲಿ ಸೋತವರು ಟೂರ್ನಿಯಿಂದಲೇ ನಿರ್ಗಮಿಸಲಿದ್ದಾರೆ. ಬಿ ಗುಂಪಿನಿಂದ ದಕ್ಷಿಣ ಆಫ್ರಿಕಾ ಮತ್ತು ಆಸ್ಟ್ರೇಲಿಯಾ 3 ಅಂಕ ಪಡೆದಿದ್ದರೂ ನೆಟ್ ರನ್ ರೇಟ್ ಉತ್ತಮವಾಗಿರುವ ಕಾರಣ ದಕ್ಷಿಣ ಆಫ್ರಿಕಾ ಮೊದಲ ಸ್ಥಾನದಲ್ಲಿದೆ. ಇಂಗ್ಲೆಂಡ್ ಆಸ್ಟ್ರೇಲಿಯಾ ವಿರುದ್ಧ ಸೋತಿದ್ದರೆ ಅಫ್ಘಾನಿಸ್ತಾನ ಆಫ್ರಿಕಾ ವಿರುದ್ಧ ಸೋತಿದೆ.