ಫೆಬ್ರವರಿ 19 ರಿಂದ ಶುರುವಾಗಲಿರುವ ಚಾಂಪಿಯನ್ ಟ್ರೋಫಿಯಲ್ಲಿ ಭಾರತ ತಂಡವನ್ನು ಹಿಟ್ ಮ್ಯಾನ್ ರೋಹಿತ್ ಶರ್ಮಾ ಮುನ್ನಡೆಸಲಿರುವುದು ಖಚಿತವಾಗಿದೆ. ಇದರಿಂದ ಇತ್ತೀಚೆಗೆ ಹರಿದಾಡುತ್ತಿದ್ದ ನಾಯಕತ್ವದ ಬದಲಾವಣೆ ಸುದ್ದಿಗೆ ಬಿಸಿಸಿಐ ಆಯ್ಕೆ ಸಮಿತಿ ತಾತ್ಕಾಲಿಕ ವಿರಾಮವಿಟ್ಟಿದೆ.
Advertisement
ಅದರಂತೆ ಇಂಗ್ಲೆಂಡ್ ವಿರುದ್ಧದ ಮೂರು ಏಕದಿನ ಪಂದ್ಯಗಳಲ್ಲಿ ಮತ್ತು ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿಯಲ್ಲಿ ಟೀಮ್ ಇಂಡಿಯಾವನ್ನು ರೋಹಿತ್ ಶರ್ಮಾ ಮುನ್ನಡೆಸಲಿದ್ದಾರೆ.
ಇನ್ನೂ ಚಾಂಪಿಯನ್ಸ್ ಟ್ರೋಫಿಯಲ್ಲಿನ ಟೀಮ್ ಇಂಡಿಯಾದ ಪ್ರದರ್ಶನದ ಆಧಾರದ ಮೇಲೆ ಭಾರತ ತಂಡದಲ್ಲಿ ಮಹತ್ವದ ಬದಲಾವಣೆ ಆಗಲಿದೆ. 2027 ರ ಏಕದಿನ ವಿಶ್ವಕಪ್ ದೃಷ್ಟಿಯಲ್ಲಿಟ್ಟುಕೊಂಡು ಹೊಸ ತಂಡವನ್ನು ರೂಪಿಸಲು ಚಿಂತಿಸಲಾಗಿದೆ ಎಂದು ಬಿಸಿಸಿಐ ಮೂಲಗಳು ತಿಳಿಸಿದೆ. ಹೀಗಾಗಿ ನಾಯಕ ಸೇರಿದಂತೆ ತಂಡದಲ್ಲಿ ಒಂದಷ್ಟು ಬದಲಾವಣೆ ಕಂಡು ಬರುವುದು ಖಚಿತ ಎನ್ನಲಾಗಿದೆ.