ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರು ಚಾಂಪಿಯನ್ಸ್ ಟ್ರೋಫಿ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲು ಪಾಕಿಸ್ತಾನಕ್ಕೆ ತೆರಳಲಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು. ಇದೀಗ ಈ ಗೊಂದಲಕ್ಕೆ BCCI ತೆರೆ ಎಳೆದಿದೆ.
ಚಾಂಪಿಯನ್ಸ್ ಟ್ರೋಫಿ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲು ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರನ್ನು ಪಾಕಿಸ್ತಾನಕ್ಕೆ ಕಳುಹಿಸದಿರಲು ಬಿಸಿಸಿಐ ನಿರ್ಧರಿಸಿದೆ.
ರೋಹಿತ್ ಶರ್ಮಾ ಪಾಕಿಸ್ತಾನಕ್ಕೆ ಪ್ರಯಾಣಿಸುತ್ತಾರೋ ಇಲ್ಲವೋ ಎಂಬುದು ದೊಡ್ಡ ಪ್ರಶ್ನೆಯಾಗಿತ್ತು. ಅದಕ್ಕೀಗ ಬಿಸಿಸಿಐ ತೆರೆ ಎಳೆದಿದ್ದು, ನಾಯಕನ ಭೇಟಿ ಮತ್ತು ಫೋಟೋಶೂಟ್‌ಗಾಗಿ ರೋಹಿತ್ ಶರ್ಮಾ ಅವರನ್ನು ಪಾಕಿಸ್ತಾನಕ್ಕೆ ಕಳುಹಿಸದಿರಲು ಬಿಸಿಸಿಐ ದೃಢ ನಿರ್ಧಾರ ತೆಗೆದುಕೊಂಡಿದೆ. ಈ ಬಗ್ಗೆ ಗೌರವ್ ಗುಪ್ತ ಮಾಹಿತಿ ನೀಡಿದ್ದಾರೆ.
ಇನ್ನೂ ಚಾಂಪಿಯನ್ಸ್ ಟ್ರೋಫಿಗಾಗಿ ಪಾಕಿಸ್ತಾನಕ್ಕೆ ಪ್ರಯಾಣಿಸಲು ಭಾರತ ನಿರಾಕರಿಸಿದ ನಂತರ, ಟೂರ್ನಮೆಂಟ್ ಅನ್ನು ಹೈಬ್ರಿಡ್ ಮಾದರಿಯಲ್ಲಿ ಆಯೋಜಿಸಲಾಗಿದೆ. ರೋಹಿತ್ ಶರ್ಮಾ ಟೂರ್ನಮೆಂಟ್ ಪೂರ್ವ ನಾಯಕರ ಸಭೆಗಾಗಿ ಪಾಕಿಸ್ತಾನಕ್ಕೆ ಪ್ರಯಾಣಿಸುವ ಬಗ್ಗೆ ಕೆಲವು ಪ್ರಶ್ನೆಗಳು ಉದ್ಭವಿಸಿದ್ದವು. ಇದೀಗ ಈ ಗೊಂದಲಕ್ಕೆ ತೆರೆ ಬಿದ್ದಂತಾಗಿದೆ.