ಮೈಸೂರು:- ಯಾವುದೇ ಕಾರಣಕ್ಕೂ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆ ಮುಂದೂಡಲು ಸಾಧ್ಯವಿಲ್ಲ ಎಂದು CM ಸಿದ್ದರಾಮಯ್ಯ ಹೇಳಿದ್ದಾರೆ.
Advertisement
ಈ ಸಂಬಂಧ ಮಾತನಾಡಿದ ಅವರು,ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆಯನ್ನು ಕಾನೂನಾತ್ಮಕವಾಗಿ ಮಾಡುತ್ತಿದ್ದೇನೆ. ಯಾರದ್ದೋ ಹೇಳಿಕೆ ಆಧರಿಸಿ ಸಭೆ ಮಾಡಲು ಆಗುವುದಿಲ್ಲ. ಸಭೆ ಮುಂದೂಡಲು ಸಾಧ್ಯವಿಲ್ಲ ಎಂದರು.
ಯದುವೀರ್ ಹೇಳಿಕೆ ಮುಖ್ಯವೋ ಕಾನೂನು ಮುಖ್ಯವೋ? ನಾನು ಕಾನೂನು ಪ್ರಕಾರವೇ ಇವತ್ತಿನ ಸಭೆ ಮಾಡುತ್ತಿದ್ದೇನೆ. ಕೋರ್ಟ್ನಲ್ಲಿ ತಡೆಯಾಜ್ಞೆ ತೆರವು ಆಗಿದ್ದಕ್ಕೆ ಸಭೆ ಮಾಡುತ್ತಿದ್ದೇನೆ ಎಂದು ಕಡ್ಡಿ ಮುರಿದಂತೆ ಸಿದ್ದರಾಮಯ್ಯ ಹೇಳಿದ್ದಾರೆ.