ಚಾಮುಂಡೇಶ್ವರಿ ನಮ್ಮ ನಾಡಿನ ಅಧಿದೇವತೆ, ಆಕೆ ಯಾರೊಬ್ಬರಿಗೂ ಸೀಮಿತ ಅಲ್ಲ -ಡಿಕೆ ಶಿವಕುಮಾರ್!

0
Spread the love

ಬೆಂಗಳೂರು:- ಚಾಮುಂಡೇಶ್ವರಿ ನಮ್ಮ ನಾಡಿನ ಅಧಿದೇವತೆ, ಆಕೆ ಯಾರೊಬ್ಬರಿಗೂ ಸೀಮಿತ ಅಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.

Advertisement

ಚಾಮುಂಡೇಶ್ವರಿ ಕೇವಲ ಹಿಂದೂಗಳ ಆಸ್ತಿ ಅಲ್ಲ. ದಸರಾ ಧಾರ್ಮಿಕ ಆಚರಣೆ ಅಲ್ಲ ಎಂದಿದ್ದ ಡಿಸಿಎಂ ಡಿಕೆ ಶಿವಕುಮಾರ್ ಅವರು ಇದೀಗ ತಮ್ಮ ಹೇಳಿಕೆಯ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.

ಈ ಬಗ್ಗೆ X ಮಾಡಿರುವ ಡಿಕೆಶಿ, ನಮ್ಮ ನಾಡ ದೇವತೆ ಚಾಮುಂಡೇಶ್ವರಿ. ಚಾಮುಂಡಿ ತಾಯಿ ನಮ್ಮ ನಾಡಿನ ಅಧಿದೇವತೆ. ಈ ತಾಯಿಯನ್ನು ಆರಾಧಿಸುವವರು, ನಂಬುವವರು, ಗೌರವಿಸುವವರು ಎಲ್ಲ ಜಾತಿ, ಧರ್ಮಗಳಲ್ಲೂ ಇದ್ದಾರೆ. ಆಕೆಯ ದರ್ಶನ ಎಲ್ಲರ ಹಕ್ಕು. ತಾಯಿ ಎಲ್ಲ ಭಕ್ತರ, ಎಲ್ಲ ಮಕ್ಕಳ ಆಸ್ತಿ, ಯಾರೊಬ್ಬರಿಗೂ ಸೀಮಿತ ಅಲ್ಲ. ತಾಯಿಯನ್ನು ಪೂಜಿಸಿದರೆ ಯಾರೂ ಬೇಡ ಅನ್ನಲು ಆಗುವುದಿಲ್ಲ. ಇದೇ ನನ್ನ ಮಾತಿನ ಸತ್ವ. ವಿವಾದ ಮಾಡೋದು ಬಿಜೆಪಿ ತತ್ವ ಎಂದಿದ್ದಾರೆ.

ಚಾಮುಂಡಿ ಬೆಟ್ಟಕ್ಕೆ ಎಲ್ಲ ಧರ್ಮ, ಸಮಾಜದವರಿಗೂ ಪ್ರವೇಶವಿದೆ. ಎಲ್ಲರೂ ಬೆಟ್ಟಕ್ಕೆ ಹೋಗುತ್ತಾರೆ. ದೇವಿಯ ಪ್ರಾರ್ಥನೆ ಮಾಡುತ್ತಾರೆ. ಎಲ್ಲರ ನೋವನ್ನು ದೂರ ಮಾಡುವವಳು ನಮ್ಮ ದುರ್ಗಾ ದೇವಿ. ನಾಡಹಬ್ಬ ದಸರಾವನ್ನು ಕಣ್ತುಂಬಿಕೊಳ್ಳಲು ದೇಶ, ವಿದೇಶಗಳಿಂದ ಜನ ಬರುತ್ತಾರೆ. ಇದಕ್ಕೆ ನಮ್ಮ ರಾಜವಂಶಸ್ಥರೇ ಅನುಮತಿ ನೀಡಿ ಸಾಕ್ಷಿಯಾಗಿದ್ದಾರೆ. ನಾಡಹಬ್ಬ ದಸರಾ ಎಲ್ಲ ಧರ್ಮದವರಿಗೂ ಸೇರಿದ್ದು. ಧರ್ಮದಲ್ಲಿ ರಾಜಕಾರಣ ಮಾಡುವುದು ಬೇಡ, ಅದನ್ನು ಆ ತಾಯಿಯೂ ಮೆಚ್ಚುವುದಿಲ್ಲ ಎಂದು ಬರೆದುಕೊಂಡಿದ್ದಾರೆ.


Spread the love

LEAVE A REPLY

Please enter your comment!
Please enter your name here