HomeKarnataka Newsನ್ಯಾಯಾಲಯದ ಆದೇಶ ಮೀರಿ ಚಾಮುಂಡಿ ಬೆಟ್ಟ ಕಾಮಗಾರಿ: ಸರ್ಕಾರಕ್ಕೆ ಹೈಕೋರ್ಟ್ ತರಾಟೆ

ನ್ಯಾಯಾಲಯದ ಆದೇಶ ಮೀರಿ ಚಾಮುಂಡಿ ಬೆಟ್ಟ ಕಾಮಗಾರಿ: ಸರ್ಕಾರಕ್ಕೆ ಹೈಕೋರ್ಟ್ ತರಾಟೆ

For Dai;y Updates Join Our whatsapp Group

Spread the love

ಬೆಂಗಳೂರು: ನ್ಯಾಯಾಲಯಕ್ಕೆ ನೀಡಿದ್ದ ಭರವಸೆಯನ್ನು ಮೀರಿ ಮೈಸೂರಿನ ಚಾಮುಂಡಿ ಬೆಟ್ಟದ ದೇವಸ್ಥಾನ ಆವರಣದಲ್ಲಿ ಕಾಮಗಾರಿ ನಡೆಸಿರುವ ರಾಜ್ಯ ಸರ್ಕಾರದ ಕ್ರಮಕ್ಕೆ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ವಿವಾದಿತ ಪ್ರದೇಶದಲ್ಲಿ ನಡೆಯುತ್ತಿರುವ ಎಲ್ಲಾ ನಿರ್ಮಾಣ ಚಟುವಟಿಕೆಗಳನ್ನು ತಕ್ಷಣವೇ ಸ್ಥಗಿತಗೊಳಿಸಲು ಮಧ್ಯಂತರ ಆದೇಶ ನೀಡಲಾಗಿದೆ.

ಚಾಮುಂಡಿ ಬೆಟ್ಟದ ಮೂಲ ಸ್ವರೂಪಕ್ಕೆ ಧಕ್ಕೆಯಾಗುವ ರೀತಿಯಲ್ಲಿ ಕಾಮಗಾರಿ ನಡೆಯುತ್ತಿದೆ ಎಂದು ಆಕ್ಷೇಪಿಸಿ ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಚಿನ್ ಶಂಕರ್ ಮಗದುಂ ಅವರಿದ್ದ ಏಕಸದಸ್ಯ ಪೀಠ ಈ ಆದೇಶ ಹೊರಡಿಸಿದೆ.

ದೇವಾಲಯದ ಆವರಣದಲ್ಲಿ ನಡೆಯುತ್ತಿರುವ ಎಲ್ಲ ರೀತಿಯ ನಿರ್ಮಾಣ ಕಾಮಗಾರಿಗಳನ್ನು ತಕ್ಷಣ ನಿಲ್ಲಿಸಬೇಕು ಎಂದು ಪೀಠ ಸೂಚಿಸಿದೆ. ಜೊತೆಗೆ, ಕಾಮಗಾರಿಗಾಗಿ ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ 47 ಕೋಟಿ ರೂ. ಅನುದಾನವನ್ನು ಯಾವ ಕೆಲಸಗಳಿಗೆ ಬಳಸಲಾಗಿದೆ ಹಾಗೂ ಎಷ್ಟು ವೆಚ್ಚ ಮಾಡಲಾಗಿದೆ ಎಂಬುದರ ಕುರಿತು ಎರಡು ವಾರಗಳೊಳಗೆ ವಿವರವಾದ ಪ್ರಮಾಣಪತ್ರ ಸಲ್ಲಿಸುವಂತೆ ಸರ್ಕಾರಕ್ಕೆ ಸೂಚನೆ ನೀಡಲಾಗಿದೆ.

ಇದಕ್ಕೂ ಮೊದಲು, ನ್ಯಾಯಾಲಯದ ಪೂರ್ವಾನುಮತಿಯಿಲ್ಲದೆ ಯಾವುದೇ ಶಾಶ್ವತ ಕಾಮಗಾರಿ ಕೈಗೊಳ್ಳುವುದಿಲ್ಲ ಎಂದು ರಾಜ್ಯ ಸರ್ಕಾರ ಭರವಸೆ ನೀಡಿತ್ತು. ಆದರೆ, ನ್ಯಾಯಾಲಯಕ್ಕೆ ಸಲ್ಲಿಸಲಾದ ಚಿತ್ರಗಳನ್ನು ಗಮನಿಸಿದರೆ, ದೇವಸ್ಥಾನ ಆವರಣದಲ್ಲಿ ಬೃಹತ್ ಮಟ್ಟದ ಶಾಶ್ವತ ನಿರ್ಮಾಣ ಕಾರ್ಯ ನಡೆದಿದೆ ಎಂಬುದು ಸ್ಪಷ್ಟವಾಗುತ್ತದೆ ಎಂದು ಪೀಠ ತಿಳಿಸಿದೆ.

ಕೇಂದ್ರ ಸರ್ಕಾರದಿಂದ 47 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ ಎಂಬ ಕಾರಣ ನೀಡಿ ಕಾಮಗಾರಿಯನ್ನು ಸಮರ್ಥಿಸಿಕೊಂಡಿರುವ ಜಿಲ್ಲಾಧಿಕಾರಿಗಳ ಕ್ರಮವನ್ನು ಪೀಠ ತೀವ್ರವಾಗಿ ಟೀಕಿಸಿದೆ. ಇದು ದುರುದ್ದೇಶಪೂರಿತವಾಗಿದ್ದು, ಕಾನೂನಾತ್ಮಕವಾಗಿ ಸಂಪೂರ್ಣ ಅಸಂಗತ ಎಂದು ಹೇಳಿದೆ.

ಜಿಲ್ಲಾಧಿಕಾರಿಗಳು ರಾಜ್ಯದ ಅಧಿಕಾರಿಯಾಗಿರುವುದರಿಂದ ನ್ಯಾಯಾಲಯದ ಆದೇಶಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದು ಅವರ ಕರ್ತವ್ಯವಾಗಿದೆ. ಆದೇಶ ಪಾಲನೆ ಮಾಡದಿರುವುದನ್ನು ಸಮರ್ಥಿಸುವ ಯಾವುದೇ ಪ್ರಯತ್ನವೂ ನ್ಯಾಯಾಂಗ ಅಧಿಕಾರದ ಉಲ್ಲಂಘನೆಯಾಗುತ್ತದೆ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!