ಚಾಮುಂಡಿ ಸೀರೆ ಕಾಳಸಂತೆಯಲ್ಲಿ ಮಾರಾಟದ ಆರೋಪ: ಸ್ನೇಹಮಯಿ ಕೃಷ್ಣ ವಿರುದ್ಧ ದಾಖಲಾಯ್ತು FIR!

0
Spread the love

ಮೈಸೂರು:- ಚಾಮುಂಡೇಶ್ವರಿ ದೇವಿಯ ಲಕ್ಷಾಂತರ ರೂಪಾಯಿ ಮೌಲ್ಯದ ಸೀರೆಗಳನ್ನು ಕಾಳಸಂತೆಯಲ್ಲಿ ಮಾರಾಟ ಮಾಡಲಾಗುತ್ತಿದೆ ಎಂಬ ಹೇಳಿಕೆ ಕೊಟ್ಟಿದ್ದ ಸ್ನೇಹಮಯಿ ಕೃಷ್ಣ ವಿರುದ್ಧ ದೂರು ದಾಖಲಾಗಿದೆ.

Advertisement

ಸರ್ಕಾರಿ ಕೆಲಸಕ್ಕೆ ಮತ್ತು ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆಂದು ಕಾರ್ಯದರ್ಶಿ ರೂಪಾ ಅವರು ಕೃಷ್ಣರಾಜ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಚಾಮುಂಡೇಶ್ವರಿ ದೇವಿಗೆ ಉಡುಗೊರೆಯಾಗಿ ನೀಡಿದ್ದ ಲಕ್ಷಾಂತರ ರೂ. ಮೌಲ್ಯದ ಸೀರೆಗಳನ್ನು ಚಾಮುಂಡೇಶ್ವರಿ ದೇವಲಾಯದ ಕಾರ್ಯದರ್ಶಿ ರೂಪಾ ಅವರು ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದಾರೆ ಎಂದು ಸ್ನೇಹಮಯಿ ಕೃಷ್ಣ ಅವರು ಗಂಭೀರ ಆರೋಪ ಮಾಡದ್ದರು. ಈ ಬಗ್ಗೆ ಮೈಸೂರಿನ ಕೃಷ್ಣರಾಜ ಪೊಲೀಸ್ ಠಾಣೆಗೆ ವಿಡಿಯೋ ಸಮೇತ ದೂರು ನೀಡಿದ್ದರು.

ಚಾಮುಂಡೇಶ್ವರಿ ದೇವಿಗೆ ಉಡುಗೊರೆಯಾಗಿ ಬಂದ ಸೀರೆಗಳನ್ನು ಕಾರ್ಯದರ್ಶಿ ರೂಪಾ ಅವರ ಕಾರಿನಲ್ಲಿ ತುಂಬಿಸಿ ಸಾಗಾಟ ಮಾಡಲಾಗುತ್ತಿದೆ. ಯುವಕನೊಬ್ಬ ಕಾರಿಗೆ ಸೀರೆ ತುಂಬಿಸಿಕೊಂಡು ಹೋಗುವ ವಿಡಿಯೋದ ಸಿಡಿಯನ್ನು ದೂರಿನೊಂದಿಗೆ ಲಗ್ಗತ್ತಿಸಿದ್ದರು.

ಈ ಹಿನ್ನೆಲೆಯಲ್ಲಿ, ಸ್ನೇಹಮಯಿ ಕೃಷ್ಣ ಅವರು ಸರ್ಕಾರಿ ಕೆಲಸಕ್ಕೆ ಅಡ್ಡಿಪಡಿಸುತ್ತಿದ್ದಾರೆ ಎಂದು ದೇವಸ್ಥಾನದ ಕಾರ್ಯದರ್ಶಿ ರೂಪ ಅವರು ದೂರು ದಾಖಲಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here