ಕರ್ನಾಟಕದ ಈ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ ಸಾಧ್ಯತೆ: ಆರೆಂಜ್ ಅಲರ್ಟ್!

0
Spread the love

ಬೆಂಗಳೂರು :- ಕರ್ನಾಟಕದ 6 ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ ಸಾಧ್ಯತೆ ಇದ್ದು, ಭಾರತೀಯ ಹವಮಾನ ಇಲಾಖೆಯು ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ.

Advertisement

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮಳೆ ಹೆಚ್ಚು ಸುರಿಯಲಿದ್ದು, ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಯಾದಗಿರಿ, ರಾಯಚೂರು, ಕಲಬುರಗಿ, ಬೀದರ್, ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಧಾರವಾಡ, ಗದಗ, ಹಾವೇರಿ, ಕೊಪ್ಪಳ, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲೂ ಮಳೆಯಾಗಲಿದೆ.

ಎಚ್​ಎಎಲ್​ನಲ್ಲಿ 29.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.7ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 30.5ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 28.2 ಡಿಗ್ರಿ ಸೆಲ್ಸಿಯಸ್​ಗರಿಷ್ಠ ಉಷ್ಣಾಂಶ, 18.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.


Spread the love

LEAVE A REPLY

Please enter your comment!
Please enter your name here