Rain News: ನವೆಂಬರ್ 14ರಿಂದ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ!

0
Spread the love

ಬೆಂಗಳೂರು:- ನವೆಂಬರ್ 14ರಿಂದ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.

Advertisement

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರದಲ್ಲಿ ಮಳೆ ಆಗಲಿದೆ.

ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

ಎಚ್​ಎಎಲ್​ನಲ್ಲಿ 28.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.2ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 28.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 29.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.


Spread the love

LEAVE A REPLY

Please enter your comment!
Please enter your name here