ಬೆಂಗಳೂರು: ಕಾನೂನಿನ ಮುಂದೆ ಚಂದ್ರಶೇಖರ ಸ್ವಾಮೀಜಿ ದೊಡ್ಡವರಲ್ಲ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಹೇಳಿದ್ದಾರೆ. ಚಂದ್ರಶೇಖರ್ ಸ್ವಾಮೀಜಿ ವಿರುದ್ಧ ಎಫ್ಐಆರ್ ದಾಖಲಾಗಿರುವ ಕುರಿತು ನಗರದಲ್ಲಿ ಮಾತನಾಡಿದ ಅವರು, ಕಾನೂನಿನ ಮುಂದೆ ಚಂದ್ರಶೇಖರ ಸ್ವಾಮೀಜಿ ದೊಡ್ಡವರಲ್ಲ. ದೇಶದಲ್ಲಿ ಎಲ್ಲರಿಗೂ ಕಾನೂನು ಒಂದೇ. ಕಾನೂನಿನ ಮುಂದೆ ನಾನೂ ಸೇರಿದಂತೆ ಎಲ್ಲರೂ ಒಂದೇ. ಕಾನೂನು ಚೌಕಟ್ಟಿನಲ್ಲಿ ಪೊಲೀಸರು ಏನು ಕೆಲಸ ಮಾಡಬೇಕೋ ಅದನ್ನು ಮಾಡುತ್ತಾರೆ ಎಂದು ಅವರು ಹೇಳಿದರು.
ಇನ್ನೂ ಹಾಸನ ಸ್ವಾಭಿಮಾನ ಸಮಾವೇಶಕ್ಕೆ ಅಸಮಾಧಾನ ಅನಾಮಧೇಯ ಪತ್ರ ವಿಚಾರವಾಗಿ ಮಾತನಾಡಿ, ಅನಾಮಧೇಯ ಪತ್ರವನ್ನು ಬಿಜೆಪಿಯವರೇ ಯಾಕೆ ಬರೆದಿರಬಾರದು. ನಮ್ಮಲ್ಲಿ ಯಾವುದೇ ಅಪಸ್ವರವಿಲ್ಲ. ನಾನು ತುಮಕೂರಿನಲ್ಲಿ ಸ್ವಾಭಿಮಾನ ಸಮಾವೇಶ ಮಾಡಲು ಹೊರಟಿದ್ದೆ. ಆದರೆ ನಮಗೆ ಬೇರೆ ಕಾರ್ಯಕ್ರಮ ಕೊಟ್ಟಿದ್ದಾರೆ. ಪಕ್ಷದಿಂದಲೇ ಸಮಾವೇಶ ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ.



