ಬೀದರ್: ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಸುಕ್ಷೇತ್ರ ಚಾಂಗಲೇರಾ ಗ್ರಾಮದ ಶ್ರೀ ವೀರಭದ್ರೇಶ್ವರ ದೇವಸ್ಥಾನದ ಆವರಣದಲ್ಲಿ ಅದ್ದೂರಿಯಾಗಿ ನಡೆಯುತ್ತಿರುವ ಇತಿಹಾಸ ಪ್ರಸಿದ್ಧ ಶ್ರೀ ವೀರಭದ್ರೇಶ್ವರ ಜಾತ್ರಾ ಮಹೋತ್ಸವ ಕಾರ್ಯಕ್ರಮದಲ್ಲಿ ಮಾಜಿ ಸಚಿವರು, ಜೆಡಿಎಸ್ ಪಕ್ಷದ ಹಿರಿಯ ನಾಯಕರು, ಜೆಡಿಎಸ್ ಕೋರ್ ಕಮಿಟಿಯ ಸದಸ್ಯರಾಗಿರುವ ಬಂಡೆಪ್ಪ ಖಾಶೆಂಪುರ್ ರವರು ಪಾಲ್ಗೊಂಡರು.
ಚಾಂಗಲೇರಾ ಗ್ರಾಮದ ಶ್ರೀ ವೀರಭದ್ರೇಶ್ವರ ದೇವಸ್ಥಾನಕ್ಕೆ ಬುಧವಾರ ಬೆಳಗ್ಗೆ ಭೇಟಿ ನೀಡಿದ ಅವರು, ಶ್ರೀ ವೀರಭದ್ರೇಶ್ವರ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ, ನಾಡಿನ ಒಳಿತಿಗಾಗಿ ಪ್ರಾರ್ಥಿಸಿದರು. ಈ ವೇಳೆ ದೇವಸ್ಥಾನ ಸಮಿತಿಯವರು ಬಂಡೆಪ್ಪ ಖಾಶೆಂಪುರ್ ರವರನ್ನು ಸನ್ಮಾನಿಸಿ ಗೌರವಿಸಿದರು.
ಈ ಸಂದರ್ಭದಲ್ಲಿ ಪ್ರಮುಖರಾದ ಬಸವರಾಜ್ ಹೆಡೆ, ಹಿಂದೂ ಧಾರ್ಮಿಕ ಹಾಗೂ ಧರ್ಮಾದಾಯ ದತ್ತಿಗಳ ಇಲಾಖೆಯ ಅಧಿಕಾರಿಗಳು, ದೇವಸ್ಥಾನ ಸಮಿತಿಯ ಮುಖಂಡರು, ಜೆಡಿಎಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಸೇರಿದಂತೆ ಅನೇಕರಿದ್ದರು.