HomeIndia Newsಕೆಪಿಸಿಸಿ ಅಧ್ಯಕ್ಷರ ಬದಲಾವಣೆ: ವರಿಷ್ಠರ ತೀರ್ಮಾನ ಅಂತಿಮ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ

ಕೆಪಿಸಿಸಿ ಅಧ್ಯಕ್ಷರ ಬದಲಾವಣೆ: ವರಿಷ್ಠರ ತೀರ್ಮಾನ ಅಂತಿಮ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ

For Dai;y Updates Join Our whatsapp Group

Spread the love

ನವದೆಹಲಿ: ಸಚಿವ ಸತೀಶ್ ಜಾರಕಿಹೊಳಿ ಕೆಪಿಸಿಸಿ ಅಧ್ಯಕ್ಷ ಬದಲಾಗಬೇಕು ಎಂದು ಅಭಿಪ್ರಾಯಪಟ್ಟಿರುವ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನ ತೆಗೆದುಕೊಳ್ಳಲಿದ್ದಾರೆ. ಅವರ ತೀರ್ಮಾನವೇ ಅಂತಿಮ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ನವದೆಹಲಿಯಲ್ಲಿ ಉದ್ಘಾಟನೆಗೆ ಸಿದ್ದವಾಗಿರುವ ಕನ್ನಡ ಭವನದ ನೂತನ ಕಟ್ಟಡವನ್ನು ವೀಕ್ಷಿಸಿದ ನಂತರ ಜಾತಿ ಗಣತಿ ವರದಿಯ ಜಾರಿ ಬಗ್ಗೆ ಉತ್ತರಿಸುತ್ತಾ ಮಾಧ್ಯಮದವರೊಂದಿಗೆ ಮಾತನಾಡಿದರು.

ಏಐಸಿಸಿ ಕಚೇರಿ ಉದ್ಘಾಟನೆ

ಏಐಸಿಸಿ ಕಚೇರಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಲೋಕಸಭಾ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಹಾಗೂ ಏಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆಯವರ ಭಾಷಣ ಉತ್ತಮವಾಗಿತ್ತು. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಅವಧಿಯಲ್ಲಿ ಶಂಕುಸ್ಥಾಪನೆಗೊಂಡಿದ್ದ ಕಟ್ಟಡ , ಇಂದು ಸುಸಜ್ಜಿತ ಕಟ್ಟಡವಾಗಿ ಉದ್ಘಾಟನೆಗೊಂಡಿದೆ ಎಂದು ತಿಳಿಸಿದರು.

ಭಾರತ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಭಾಗವಹಿಸಲಿಲ್ಲ

ಆರ್ ಎಸ್ ಎಸ್ ಪ್ರಮುಖ ಮೋಹನ್ ಭಾಗವತ್ ಅವರು ಆಯೋಧ್ಯೆಯ ರಾಮಮಂದಿರ ಪ್ರಾರಂಭವಾದ ದಿನ ದೇಶಕ್ಕೆ ನಿಜಅರ್ಥದಲ್ಲಿ ಸ್ವಾತಂತ್ರ್ಯ  ಲಭಿಸಿದೆ ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಈ ಬಗ್ಗೆ ರಾಹುಲ್ ಗಾಂಧಿಯವರು ತಮ್ಮ ಭಾಷಣದಲ್ಲಿಯೂ ಪ್ರಸ್ತಾಪಿಸಿದ್ದರು. ಭಾರತ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಭಾಗವಹಿಸದೇ ಆರ್ ಎಸ್ ಎಸ್ ಹಾಗೂ ಬಿಜೆಪಿಯವರು ಬ್ರಿಟೀಷರೊಂದಿಗೆ ಶಾಮೀಲಾಗಿದ್ದರು. ಮೋಹನ್ ಭಾಗವತರ ಹೇಳಿಕೆ ಸರಿಯಾದುದಲ್ಲ ಎಂದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!