HomeKarnataka Newsಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಹೈಕಮಾಂಡ್‌ ವಿವೇಚನೆಗೆ ಬಿಟ್ಟಿದ್ದು: ಸತೀಶ್‌ ಜಾರಕಿಹೊಳಿ

ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಹೈಕಮಾಂಡ್‌ ವಿವೇಚನೆಗೆ ಬಿಟ್ಟಿದ್ದು: ಸತೀಶ್‌ ಜಾರಕಿಹೊಳಿ

For Dai;y Updates Join Our whatsapp Group

Spread the love

ಹುಬ್ಬಳ್ಳಿ: ಕೆಪಿಸಿಸಿ ಅಧ್ಯಕ್ಷರ ಬದಲಾವಣೆಯಲ್ಲಿ ಸದ್ಯಕ್ಕೆ ಯಾವುದೇ ಬದಲಾವಣೆಗಳಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷರ ಬದಲಾವಣೆಯಲ್ಲಿ ವಿಚಾರದಲ್ಲಿ ಸದ್ಯಕ್ಕೆ ಯಾವುದೇ ಬದಲಾವಣೆಗಳಿಲ್ಲ.

ನಾನು ಕೆಪಿಸಿಸಿ ಅಧ್ಯಕ್ಷನಾಗ ಬೇಕು ಅನ್ನೋದು ನನ್ನ ವಿವೇಚನೆಗೆ ಬಿಟ್ಟಿದ್ದಲ್ಲ. ಹೈಕಮಾಂಡ್ ವಿವೇಚನೆಗೆ ಬಿಟ್ಟಿದ್ದು. ಕೆ.ಪಿ.ಎಸ್.ಸಿ ಯಲ್ಲಿ ಗೊಂದಲ ಮುಂದಿರುವ ವಿಚಾರ ಎಲ್ಲ ಸರ್ಕಾರಗಳ ಸಂದರ್ಭದಲ್ಲಿಯೂ ಈ ರೀತಿಯ ಗೊಂದಲಗಳಾಗಿವೆ. ಕೆಪಿಎಸ್ಸಿ ಸ್ವತಂತ್ರ ಆಯೋಗವಿದ್ದು, ಇದನ್ನು ಅವರೇ ಸರಿಮಾಡಬೇಕು ಎಂದು ಅವರು ಸಲಹೆ ನೀಡಿದರು.

ಇನ್ನೂ ಸುಹಾಸ್ ಶೆಟ್ಟಿ ಜೊತೆಗೆ ಇತರೆ ಕೆಲವರ ಕೊಲೆಗೆ ಬೆದರಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿರುವ ಅವರು, ಯಾರಿಗೆ ಬೆದರಿಕೆ ಇದೆಯೋ ಅವರು ಪೊಲೀಸರಿಗೆ ದೂರು ನೀಡಬೇಕು ಎಂದ ಅವರು, ನೀಟ್ ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ವಿಚಾರವಾಗಿ ಮಾತನಾಡಿದ ಅವರು, ಯಾವುದಾದರೂ ಒಂದು ಘಟನೆ ನಡೆದಿರಬಹುದು. ಕಳೆದ ಬಾರಿ ನಡೆದಿದ್ದ ಘಟನೆ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಸರ್ಕಾರದ ಸಂಸ್ಥೆಗಳಲ್ಲಿ ಈ ಘಟನೆ ನಡೆದಿಲ್ಲ. ಈ ವಿಚಾರಕ್ಕೆ ನಮ್ಮ ಸರ್ಕಾರವನ್ನು ಹೊಣೆ ಮಾಡಲು ಆಗಲ್ಲ ಎಂದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!