HomeKarnataka Newsಚನ್ನಪಟ್ಟಣ ಜೆಡಿಎಸ್ ಭದ್ರಕೋಟೆ, ಬಿಜೆಪಿಗೆ ಬಿಟ್ಟುಕೊಡುವ ಒಪ್ಪಂದ ಆಗಿಲ್ಲ: ಹೆಚ್‌ಡಿಕೆ!

ಚನ್ನಪಟ್ಟಣ ಜೆಡಿಎಸ್ ಭದ್ರಕೋಟೆ, ಬಿಜೆಪಿಗೆ ಬಿಟ್ಟುಕೊಡುವ ಒಪ್ಪಂದ ಆಗಿಲ್ಲ: ಹೆಚ್‌ಡಿಕೆ!

For Dai;y Updates Join Our whatsapp Group

Spread the love

ರಾಮನಗರ:- ಬಿಜೆಪಿಗೆ ಚನ್ನಪಟ್ಟಣ ಕ್ಷೇತ್ರ ಬಿಟ್ಟುಕೊಡುವ ಒಪ್ಪಂದ ಆಗಿಲ್ಲ ಎಂದು ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಜೆಡಿಎಸ್ ಕಾರ್ಯಕರ್ತರ ಸಭೆ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಲೋಕಸಭೆ ಚುನಾವಣೆ ವೇಳೆ ಮಂಡ್ಯದಿಂದ ಸ್ಪರ್ಧಿಸುವ ಮೊದಲು ಚನ್ನಪಟ್ಟಣ ವಿಧಾನಸಭೆ ಕ್ಷೇತ್ರವನ್ನು ಬಿಜೆಪಿಗೆ ಬಿಟ್ಟುಕೊಡುವ ಬಗ್ಗೆ ಯಾವುದೇ ಚರ್ಚೆ ಅಥವಾ ಒಪ್ಪಂದ ಆಗಿರಲಿಲ್ಲ ಎಂದರು.

ಇನ್ನೂ ಅವತ್ತು ಏನು ನಡೆಯಿತು ಎಂದು ಹೇಳಲೇಬೇಕು. ಜನರಿಗೆ ಸತ್ಯ ಗೊತ್ತಾಗಬೇಕು ಎಂಬುದು ನನ್ನ ಉದ್ದೇಶ. ಬೆಂಗಳೂರು ಗ್ರಾಮಾಂತರ ಲೋಕಾಸಭೆ ಕ್ಷೇತ್ರದಿಂದ ಡಾ.ಸಿ.ಎನ್ ಮಂಜುನಾಥ್ ಅವರು ಬಿಜೆಪಿ ಅಭ್ಯರ್ಥಿಯಾಗಲು ಕೇಂದ್ರದ ಗೃಹ ಸಚಿವರಾದ ಅಮಿತ್ ಶಾ ಅವರೇ ಮೂಲ ಕಾರಣ. ಅವರ ಒತ್ತಾಯಕ್ಕೆ ಗೌರವ ಕೊಟ್ಟು, ಅವರ ಮಾತಿಗೆ ತಲೆಬಾಗಿ ಅವರನ್ನು ಅಭ್ಯರ್ಥಿ ಮಾಡಲಾಯಿತು ಎಂದರು.

ಈ ಕ್ಷಣದ ತನಕ ಚನ್ನಪಟ್ಟಣ ಕ್ಷೇತ್ರದಲ್ಲಿ ಅಭ್ಯರ್ಥಿ ಯಾರಾಗಬೇಕು ಎಂದು ನಾನು ನಿರ್ಧಾರ ಮಾಡಿಲ್ಲ. ಕಾರ್ಯಕರ್ತರ ಸಭೆಗಳನ್ನು ಮಾಡಲಾಗುತ್ತಿದೆ. ಅಂತಿಮವಾಗಿ ರಾಜ್ಯ ಮತ್ತು ದೆಹಲಿ ಮಟ್ಟದ ನಾಯಕರ ಜತೆ ಚರ್ಚೆ ನಡೆಸಿ ನಿರ್ಧಾರ ಮಾಡಲಾಗುವುದು.

ಬಿಜೆಪಿ ನಾಯಕರು, ಕಾರ್ಯಕರ್ತರು ಸಭೆ ಮಾಡಿರುವುದರಲ್ಲಿ ತಪ್ಪೇನಿಲ್ಲ. ಅದನ್ನು ತಪ್ಪು ಎಂದು ನಾನು ಹೇಳಲಾರೆ. ಚನ್ನಪಟ್ಟಣ ಜೆಡಿಎಸ್ ಭದ್ರಕೋಟೆಯಾಗಿದೆ. ಕಾರ್ಯಕರ್ತರ ಅಭಿಪ್ರಾಯದಂತೆ ನಾನು ನಿರ್ಧಾರ ಕೈಗೊಳ್ಳಬೇಕಿದೆ. ಏಕೆಂದರೆ ಕಾರ್ಯಕರ್ತರು ಪಕ್ಷವನ್ನು ಬಲಿಷ್ಠವಾಗಿ ಸಂಘಟನೆ ಮಾಡಿಕೊಂಡಿದ್ದಾರೆ. ಅವರ ಅಭಿಪ್ರಾಯಕ್ಕೆ ವಿರುದ್ಧವಾಗಿ ನಾನು ನಿರ್ಧಾರ ಕೈಗೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದರು.

ನಾನು ಪ್ರಾಥಮಿಕ ಹಂತದಲ್ಲಿಯೇ ಯೋಗೇಶ್ವರ್ ಅವರಿಗೆ ಹೇಳಿದ್ದೆ. ಜೆಡಿಎಸ್-ಬಿಜೆಪಿ ಒಂದಾದರೆ ಇಲ್ಲಿ ಗೆಲ್ಲುವುದು ಕಷ್ಟವಲ್ಲ. ಕಾಂಗ್ರೆಸ್ ಪಕ್ಷವನ್ನು ರಾಷ್ಟ್ರಮಟ್ಟದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಕಟ್ಟಿ ಹಾಕಲಾಗಿದೆ. ಅದೇ ರೀತಿ ಚನ್ನಪಟ್ಟಣದಲ್ಲಿಯೂ ಕಟ್ಟಿ ಹಾಕಬೇಕಿದೆ. ಒಮ್ಮತದ ಎನ್‌ಡಿಎ ಅಭ್ಯರ್ಥಿ ಹಾಕಿದರೆ ಇದು ಸುಲಭ ಎಂದಿದ್ದೇನೆ ಎಂದು ತಿಳಿಸಿದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!