HomePolitics Newsಚನ್ನಪಟ್ಟಣ ಚುನಾವಣೆಗೂ ಸಿಎಂ ಬದಲಾವಣೆಗೂ ಯಾವುದೇ ಸಂಬಂಧವಿಲ್ಲ: ಸಚಿವ ಚಲುವರಾಯಸ್ವಾಮಿ

ಚನ್ನಪಟ್ಟಣ ಚುನಾವಣೆಗೂ ಸಿಎಂ ಬದಲಾವಣೆಗೂ ಯಾವುದೇ ಸಂಬಂಧವಿಲ್ಲ: ಸಚಿವ ಚಲುವರಾಯಸ್ವಾಮಿ

For Dai;y Updates Join Our whatsapp Group

Spread the love

ಬೆಂಗಳೂರು: ಚನ್ನಪಟ್ಟಣ ವಿಧಾನಸಭೆ ಚುನಾವಣೆಗೂ ಸಿಎಂ ಬದಲಾವಣೆಗೂ ಯಾವುದೇ ಸಂಬಂಧವಿಲ್ಲ ಎಂದು ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಚನ್ನಪಟ್ಟಣ ವಿಧಾನಸಭೆ ಚುನಾವಣೆಗೂ ಸಿಎಂ ಬದಲಾವಣೆಗೂ ಯಾವುದೇ ಸಂಬಂಧವಿಲ್ಲ.

ಸಿಎಂ ಬದಲಾವಣೆ ವಿಚಾರ ಇದೀಗ ಅಪ್ರಸ್ತುತ. ಅದನ್ನು ಚರ್ಚೆ ಮಾಡುವ ಅವಶ್ಯಕತೆ ಇಲ್ಲ. ಚನ್ನಪಟ್ಟಣ ಸೇರಿದಂತೆ ನಾವು ಮೂರು ಕ್ಷೇತ್ರಗಳನ್ನು ಗೆಲ್ಲುತ್ತೇವೆ ಎಂದು ಸಚಿವ ಚಲುವರಾಯಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು.

ಸರ್ಕಾರದ ಗ್ಯಾರಂಟಿ ಯೋಜನೆ, ಸರ್ಕಾರದ ಸಾಧನೆಗಳ ಮೇಲೆ ನಾವು ಮತ ಕೇಳ್ತೀವಿ. ಗ್ಯಾರಂಟಿಗಳು ಒಕ್ಕಲಿಗ ಸಮುದಾಯಕ್ಕೂ ತಲುಪುತ್ತಿವೆ. ನಮಗೆ ಸಿಎಂ ಸಿದ್ದರಾಮಯ್ಯ ಅವರು ಯಾವುದೇ ಟಾಸ್ಕ್ ಅಂತ ನೀಡಿಲ್ಲ. ಆದರೆ ಹಳೇ ಮೈಸೂರು ಭಾಗದ ನಾವೆಲ್ಲ ಚನ್ನಪಟ್ಟಣದಲ್ಲಿ ಪ್ರಚಾರ ಮತ್ತು ಚುನಾವಣಾ ತಂತ್ರಗಾರಿಕೆಯನ್ನು ಮಾಡುತ್ತೇವೆ ಎಂದು ಹೇಳಿದರು.

 


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!