ವಿಜಯಸಾಕ್ಷಿ ಸುದ್ದಿ, ಲಕ್ಕುಂಡಿ: ಲಿಂಗೈಕ್ಯ ಬಸವರಾಜೇಂದ್ರ ಮಹಾಸ್ವಾಮಿಗಳ 13ನೇ ಪುಣ್ಯಸ್ಮರಣೋತ್ಸವದ ಅಂಗವಾಗಿ ಇಲ್ಲಿಯ ಅಲ್ಲಮಪ್ರಭುದೇವರ ಮಠದ ರಥೋತ್ಸವವು ಶುಕ್ರವಾರ ಸಂಜೆ ಸಂಭ್ರಮದಿಂದ ನೆರವೇರಿತು.
Advertisement
ಶ್ರೀಮಠದ ಸಿದ್ಧಲಿಂಗೇಶ್ವರ ಸ್ವಾಮೀಜಿ, ಹೊಸರಿತ್ತಿಯ ಗುದ್ದಲೀಶ್ವರ ಸ್ವಾಮೀಜಿ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಪೂಜೆ ಸಲ್ಲಿಸಿ ರಥೋತ್ಸವಕ್ಕೆ ಚಾಲನೆ ನೀಡಿದರು. ಡೊಳ್ಳು ಮೇಳ ಹಾಗೂ ಜಾಂಜ್ ಮೇಳ ಸೇರಿದಂತೆ ವಿವಿಧ ಜಾನಪದ ವಾದ್ಯಗಳು ರಥೋತ್ಸವದಲ್ಲಿ ಭಾಗವಹಿಸಿದ್ದವು. ಶ್ರೀಮಠದಿಂದ ಚೌಕಿಮಠದವರೆಗೂ ರಥವು ಸಾಗಿತು.
ಇದಕ್ಕೂ ಪೂರ್ವ ಬೆಳಿಗ್ಗೆ ಬಸವರಾಜೇಂದ್ರ ಮಹಾಸ್ವಾಮಿಗಳ ಗದ್ದುಗೆಗೆ ಅಭಿಷೇಕ, ವಿಶೇಷ ಪೂಜಾ ಕೈಂಕರ್ಯಗಳು ಜರುಗಿದವು. ನಂತರ ಸಾಮೂಹಿಕ ವಿವಾಹ, ಅನ್ನ ಸಂತರ್ಪಣೆ ನೆರವೇರಿತು.