Homecultureತೋಂಟದ ಸಿದ್ಧಲಿಂಗಶ್ರೀಗಳ ದತ್ತಿ ಉಪನ್ಯಾಸ ಇಂದು

ತೋಂಟದ ಸಿದ್ಧಲಿಂಗಶ್ರೀಗಳ ದತ್ತಿ ಉಪನ್ಯಾಸ ಇಂದು

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗದಗ : ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಫೆ.೨೪ರಂದು ಸಂಜೆ ೬ ಗಂಟೆಗೆ ತೋಂಟದ ಸಿದ್ಧಲಿಂಗಶ್ರೀ ಕನ್ನಡ ಭವನ, ಕಸಾಪ ಕಾರ್ಯಾಲಯ ಗದಗ ಇಲ್ಲಿ ತೋಂಟದ ಸಿದ್ಧಲಿಂಗಶ್ರೀಗಳ ಸ್ಮರಣಾರ್ಥ ದತ್ತಿ ಉಪನ್ಯಾಸವನ್ನು ಏರ್ಪಡಿಸಲಾಗಿದೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಕಸಾಪ ಅಧ್ಯಕ್ಷ ವಿವೇಕಾನಂದಗೌಡ ಪಾಟೀಲ ವಹಿಸುವರು. `ಕನ್ನಡಕ್ಕೆ ಡಾ. ತೋಂಟದ ಸಿದ್ಧಲಿಂಗಶ್ರೀಗಳ ಕೊಡುಗೆ’ ಕುರಿತಾಗಿ ಸಂಸ್ಕೃತಿ ಚಿಂತಕ ಎಸ್.ಎಸ್ ಹರ್ಲಾಪೂರ ಉಪನ್ಯಾಸ ನೀಡುವರು. ‘ಕಿತ್ತೂರ ಕರ್ನಾಟಕ’ ದಿನಪತ್ರಿಕೆ ಸಂಪಾದಕ ಮಂಜುನಾಥ ಅಬ್ಬಿಗೇರಿ ಇವರಿಗೆ ಸಂಮಾನ ಜರುಗಲಿದೆ. ಮುಖ್ಯ ಅತಿಥಿಗಳಾಗಿ ಜ. ತೋಂಟದಾರ್ಯ ವಿದ್ಯಾಪೀಠದ ಕಾರ್ಯದರ್ಶಿ ಎಸ್.ಎಸ್. ಪಟ್ಟಣಶೆಟ್ಟರ ಪಾಲ್ಗೊಳ್ಳುವರು. ದತ್ತಿದಾನಿಗಳಾದ ಸುರೇಖಾ ಸದಾನಂದ ಪಿಳ್ಳಿ ಉಪಸ್ಥಿತರಿರುವರು.

ಕಾರ್ಯಕ್ರಮದಲ್ಲಿ ಸಾಹಿತ್ಯಾಭಿಮಾನಿಗಳು, ಪರಿಷತ್ತಿನ ಸದಸ್ಯರು ಪಾಲ್ಗೊಳ್ಳಬೇಕೆಂದು ಕಾರ್ಯದರ್ಶಿಗಳಾದ ಶಿವಾನಂದ ಗಿಡ್ನಂದಿ, ಕಿಶೋರಬಾಬು ನಾಗರಕಟ್ಟಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!