ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದ ಯುವತಿಯೊಬ್ಬಳ್ಳಿಗೆ ಪೊಲೀಸ್ ಪೇದೆಯೊಬ್ಬ ಪ್ರೀತಿಸಿ ದೈಹಿಕ ಸಂಪರ್ಕ ಬೆಳೆಸಿ ಮದುವೆ ಮಾಡಿಕೊಳ್ಳುವುದಾಗಿ ನಂಬಿಸಿ ಮೋಸ ಮಾಡಿರುವ ಆರೋಪ ಕೇಳಿಬಂದಿದೆ. ಇನ್ನೂ ಘಟನೆಯಲ್ಲಿ ಯುವತಿ ಶಿರಿಷಾ ಗುಡಿಬಂಡೆ ವಿಷ ಸೇವಿಸಿ ಆತ್ಮಹತ್ಯೆ ಗೆ ಯತ್ನಸಿದ್ದು,
ಜೊತೆಗೆ ಪೊಲೀಸ್ ಪೇದೆ ಸಹ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ ಮಾಡಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರ ಪೊಲೀಸ್ ಠಾಣೆಯ ತಿಮ್ಮಣ್ಣ ರಾಮಪ್ಪ ಭೂಸರೆಡ್ಡಿ ವಿರುದ್ಧ ವಂಚನೆ ಆರೋಪ ಕೇಳಿ ಬಂದಿದೆ. ಇನ್ನೂ ವಿಷ ಸೇವಿಸಿದ ಇಬ್ಬರನ್ನು ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.
ಇನ್ನೂ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ಎಸ್ಪಿ ಕುಶಾಲ್ ಚೌಕ್ಸಿ ಭೇಟಿ ನೀಡಿ ವಿಚಾರಣೆ ನಡೆಸಿದ್ದಾರೆ. ಚಿಕ್ಕಬಳ್ಳಾಪುರ ಮುನಿಸಿಪಾಲ್ ಕಾಲೇಜಿನಲ್ಲಿ ಕರೆಸ್ಪಾಂಡೆನ್ಸ್ ನಲ್ಲಿ ಪದವಿ ಮಾಡ್ತಿದ್ದ ಇಬ್ಬರು. ಕಾಲೇಜಿನಲ್ಲಿ ಇಬ್ಬರಿಗೆ ಪರಿಚಯವಾಗಿ ಪ್ರೇಮವಾಗಿದೆ. ನಂತರ ಮದುವೆ ಮಾಡಿಕೊಳ್ಳುವುದಾಗಿ ಹೇಳಿ ದೈಹಿಕ ಸಂಪರ್ಕ ಕೂಡ ಬೆಳೆಸಿದ್ದಾರೆ.
ತಿಮ್ಮಣ್ಣ ರಾಮಪ್ಪ ಭೂಸರೆಡ್ಡಿ ಈಗ ಅಂತರ್ಜಾತಿ ಅಂತ ಈಗ ಮದುವೆಗೆ ವಿರೋಧ ಮಾಡುತ್ತಿದ್ದಾರೆ ಎಂದು ಯುವತಿ ಆರೋಪಿಸಿದ್ದಾರೆ.