HomeKarnataka Newsಚೆನ್ನಮ್ಮ ಅಂತ್ಯಕ್ರಿಯೆ; ಇಂದು ಹೊಳೆನರಸೀಪುರ ತಾಲೂಕಿನ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ!

ಚೆನ್ನಮ್ಮ ಅಂತ್ಯಕ್ರಿಯೆ; ಇಂದು ಹೊಳೆನರಸೀಪುರ ತಾಲೂಕಿನ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ!

For Dai;y Updates Join Our whatsapp Group

ಹೊಳೆನರಸೀಪುರ: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಪತ್ನಿ ಚೆನ್ನಮ್ಮ ಅವರ ಅಂತ್ಯಕ್ರಿಯೆ ಹಿನ್ನೆಲೆಯಲ್ಲಿ ಇಂದು (ಜುಲೈ 20) ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲ್ಲೂಕಿನ ಎಲ್ಲಾ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು ಮತ್ತು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಚೆನ್ನಮ್ಮ ಅವರ ಅಂತ್ಯಕ್ರಿಯೆ ಮಾವಿನಕೆರೆ ಶ್ರೀರಂಗನಾಥಸ್ವಾಮಿ ಬೆಟ್ಟದ ತಪ್ಪಲು ಪ್ರದೇಶದ ಕ್ಯಾತನಹಳ್ಳಿಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಯಲಿದ್ದು, ಅಂತ್ಯಕ್ರಿಯೆಗೆ ಸಾವಿರಾರು ಜನರು ಹಾಗೂ ಗಣ್ಯರು ಆಗಮಿಸುವ ನಿರೀಕ್ಷೆಯಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸಂಚಾರಕ್ಕೆ ತೊಂದರೆಯಾಗದಂತೆ ಜಿಲ್ಲಾಧಿಕಾರಿ ಲತಾಕುಮಾರಿ ಮುಂಜಾಗ್ರತಾ ಕ್ರಮವಾಗಿ ಇಂದು ರಜೆ ಘೋಷಿಸಿದ್ದಾರೆ.

ಚೆನ್ನಮ್ಮ ಅವರ ನಿಧನಕ್ಕೆ ಸಂತಾಪ ಸೂಚಿಸುವ ಸಲುವಾಗಿ ಇಂದು ಹೊಳೆನರಸೀಪುರ ಪಟ್ಟಣದ ವ್ಯಾಪಾರಸ್ಥರು ಸ್ವಯಂಪ್ರೇರಿತವಾಗಿ ಅಂಗಡಿ-ಮುಂಗಟ್ಟುಗಳನ್ನು ಬಂದ್ ಮಾಡಲಿದ್ದಾರೆ. ಜೊತೆಗೆ ಜಿಲ್ಲೆಯಲ್ಲಿ ಮದ್ಯ ಮಾರಾಟಕ್ಕೂ ನಿಷೇಧ ಹೇರಲಾಗಿದೆ.

ಇಂದು ಬೆಳಗ್ಗೆ 7ರಿಂದ 9.30ರವರೆಗೆ ಹೊಳೆನರಸೀಪುರದಲ್ಲಿರುವ ರೇವಣ್ಣ ನಿವಾಸದಲ್ಲಿ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಬಳಿಕ ಪಾರ್ಥಿವ ಶರೀರವನ್ನು ಕ್ಯಾತನಹಳ್ಳಿಗೆ ಕೊಂಡೊಯ್ಯಲಾಗುವುದು.

ಮಧ್ಯಾಹ್ನ 2ರಿಂದ ಸಂಜೆ 4.15ರವರೆಗೆ ಶ್ರೀರಂಗನಾಥಸ್ವಾಮಿ ಬೆಟ್ಟದ ತಪ್ಪಲು ಪ್ರದೇಶದಲ್ಲಿ ಒಕ್ಕಲಿಗ ಸಂಪ್ರದಾಯದಂತೆ ಹಾಗೂ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಲಿದೆ.

ಅಂತ್ಯಕ್ರಿಯೆ ಹಿನ್ನೆಲೆಯಲ್ಲಿ 5 ಎಸ್‌ಪಿಗಳ ನೇತೃತ್ವದಲ್ಲಿ 2 ಸಾವಿರಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಗಣ್ಯರ ಸಂಚಾರಕ್ಕಾಗಿ ಐದು ಹೆಲಿಪ್ಯಾಡ್‌ಗಳನ್ನು ನಿರ್ಮಿಸಲಾಗಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img