ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 1402 ಕೋಟಿ ರೂ ಚೆಕ್ ವಿತರಣೆ

0
Spread the love

ವಿಜಯಸಾಕ್ಷಿ ಸುದ್ದಿ, ಬೆಂಗಳೂರು: ಕರ್ನಾಟಕ ಸ್ಟೇಟ್ ಮಿನರಲ್ಸ್ ಕಾರ್ಪೋರೇಷನ್ ಲಿಮಿಟೆಡ್ (ಈ ಹಿಂದೆ ಮೈಸೂರು ಮಿನರಲ್ಸ್ ಸಂಸ್ಥೆ) ಗಣಿಗಾರಿಕೆಯಲ್ಲಿ ತೊಡಗಿರುವ ಕರ್ನಾಟಕ ಸರ್ಕಾರದ ಸಂಪೂರ್ಣ ಮಾಲೀಕತ್ವದ ಒಂದು ಉನ್ನತ ಸಾರ್ವಜನಿಕ ಉದ್ದಿಮೆಯಾಗಿದ್ದು, ಸಂಸ್ಥೆಯು 2023-24ನೇ ಸಾಲಿನಲ್ಲಿ ರೂ.1403.58 ಕೋಟಿ ವಹಿವಾಟು ನಡೆಸಿ ರೂ. 867.33 ಕೋಟಿ ತೆರಿಗೆ ಪೂರ್ವ ಲಾಭ ಹಾಗೂ ರೂ. 643.20 ಕೋಟಿ ತೆರಿಗೆ ನಂತರದ ಲಾಭ ಗಳಿಸಿದೆ.

Advertisement

ಇತ್ತೀಚೆಗೆ ನಡೆದ 354ನೇ ಮಂಡಳಿ ಸಭೆಯಲ್ಲಿ ಕಂಪನಿಯು 2023-24ನೇ ಸಾಲಿನಲ್ಲಿ ಗಳಿಸಿರುವ ನಿವ್ವಳ ಲಾಭದ  ಮೇಲೆ ಷೇರುದಾರರಿಗೆ (ಸರ್ಕಾರಕ್ಕೆ) ರೂ.191.43 ಕೋಟಿಗಳನ್ನು ಶೇ.30 ಲಾಭಾಂಶವಾಗಿ ನೀಡಲು ಮಂಡಳಿಯ ನಿರ್ದೇಶಕರು ಒಪ್ಪಿಗೆ ನೀಡಿದ್ದು, 58ನೇ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಅನುಮೋದನೆಗೊಂಡಿದೆ.

ಪ್ರತಿ ವರ್ಷ ಈ ನಿಗಮದಿಂದ ರೂ.15 ಕೋಟಿಗಳನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಆಯವ್ಯಯದಲ್ಲಿ ನಿಗದಿಪಡಿಸಲಾಗುತ್ತಿದ್ದು, 2023-24ನೇ ಸಾಲಿಗೆ ರೂ.15 ಕೋಟಿಗಳನ್ನು ನಿಗದಿಪಡಿಸಿದ್ದು, ರೂ. 15 ಕೋಟಿಗಳನ್ನು ಅರ್ಪಿಸಲಾಯಿತು.

ಮಾ.14ರಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಎಸ್.ಎಸ್. ಮಲ್ಲಿಕಾರ್ಜುನ, ಕರ್ನಾಟಕ ಸ್ಟೇಟ್ ಮಿನರಲ್ಸ್ ಕಾರ್ಪೋರೇಷನ್ ಅಧ್ಯಕ್ಷ ಜಿ.ಎಸ್. ಪಾಟೀಲ 2023-24ನೇ ಸಾಲಿಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ರೂ.15 ಕೋಟಿಗಳ ಧನಾದೇಶವನ್ನು, ರೂ.191.43 ಕೋಟಿಗಳ ಲಾಭಾಂಶದ ಧನಾದೇಶವನ್ನು ಹಾಗೂ ರೂ.1195.63 ಕೋಟಿಗಳ ವಿಶೇಷ ಲಾಭಾಂಶವನ್ನು ಅರ್ಪಿಸಿದರು.

ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಸರ್ಕಾರದ ಕಾರ್ಯದರ್ಶಿ ರಮಣ್ ದೀಪ್ ಚೌಧರಿ, ಕೆ.ಎಸ್.ಎಮ್.ಸಿ.ಎಲ್ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ್ ಬಿಳಗಿ ಹಾಗೂ ನಿಗಮದ ಅಧಿಕಾರಿಗಳು ಹಾಜರಿದ್ದರು.


Spread the love

LEAVE A REPLY

Please enter your comment!
Please enter your name here