ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ಶುಕ್ರವಾರ ಶಿರಹಟ್ಟಿ ತಾಲೂಕಿನ ಗುಡ್ಡದಪೂರ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಛಬ್ಬಿ ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬ ನಡೆಯಿತು.
ಕಾರ್ಯಕ್ರಮದಲ್ಲಿ ಮಾತನಾಡಿದ ಗದಗ ಡಯಟ್‌ನ ಉಪನಿರ್ದೇಶಕ (ಅಭಿವೃದ್ಧಿ) ಜಿ.ಎಂ. ಮುಂದಿನಮನಿ, ಮಕ್ಕಳ ಕಲಿಕಾ ಸುಧಾರಣೆಗೆ ಇಲಾಖೆಯು ಇಂತಹ ಕಾರ್ಯಕ್ರಮಗಳನ್ನು ಆಯೋಜಿಸಿದ್ದು, ಇದರ ಸದುಪಯೋಗವನ್ನು ಪಡೆದುಕೊಂಡು ಎಲ್ಲರೂ ಶೈಕ್ಷಣಿಕವಾಗಿ ಮುಖ್ಯವಾಹಿನಿಗೆ ಬರಬೇಕೆಂದು ಕರೆ ನೀಡಿದರು.
ಬಿಇಓ ಎಚ್.ಎನ್. ನಾಯಕ, ಗದಗ ಡಯಟ್‌ನ ಹಿರಿಯ ಉಪನ್ಯಾಸಕ ಎಚ್.ಬಿ. ರಡ್ಡೇರ, ಅರವಟಗಿ, ಕ್ಷೇತ್ರ ಸಮನ್ವಯಾಧಿಕಾರಿ ಬಿ.ಎಸ್. ಭಜಂತ್ರಿ, ಇಸಿಓ, ಎಸ್‌ಡಿಎಂಸಿ ಪದಾಧಿಕಾರಿಗಳು ಹಾಗೂ ಕ್ಲಸ್ಟರ್ ವ್ಯಾಪ್ತಿಯ ಮುಖ್ಯೋಪಾಧ್ಯಾಯರು ಭಾಗವಹಿಸಿದ್ದರು.



