ಮುಖ್ಯಮಂತ್ರಿ ರೈತ ವಿದ್ಯಾನಿಧಿ

0
raita vidyanidhi
Spread the love

ವಿಜಯಸಾಕ್ಷಿ ಸುದ್ದಿ, ಗದಗ : ರೈತರ ಮಕ್ಕಳ ಸ್ನಾತಕೋತ್ತರ ಶಿಕ್ಷಣದವರೆಗೆ ವಿಧ್ಯಾಭ್ಯಾಸವನ್ನು ಪ್ರೋತ್ಸಾಹಿಸಲು ರಾಜ್ಯ ಸರ್ಕಾರ ೨೦೨೩-೨೪ನೇ ಸಾಲಿನಲ್ಲಿ `ಮುಖ್ಯಮಂತ್ರಿ ರೈತ ವಿದ್ಯಾನಿದಿ’ ಕಾರ್ಯಕ್ರಮ ಹಾಗೂ ಭೂರಹಿತ ಕೃಷಿ ಕಾರ್ಮಿಕರ ವಿದ್ಯಾನಿಧಿ ಕಾರ್ಯಕ್ರಮವನ್ನು ಮುಂದುವರೆಸಿದೆ.

Advertisement

ಈ ಯೋಜನೆಯಡಿ ಎಸ್‌ಎಸ್‌ಎಲ್‌ಸಿ/೧೦ನೇ ತರಗತಿಯನ್ನು ಪೂರೈಸಿರುವ ಹಾಗೂ ಕರ್ನಾಟಕ ರಾಜ್ಯದ ಯಾವುದೇ ಭಾಗದಲ್ಲಿರುವ ಅಧಿಕೃತವಾಗಿ ನೋಂದಣಿಯಾಗಿರುವ ಶಿಕ್ಷಣ ಸಂಸ್ಥೆ/ವಿಶ್ವವಿದ್ಯಾನಿಲಯಗಳಲ್ಲಿ ಸ್ನಾತಕೋತ್ತರ ಕೋರ್ಸ್ಗಳವರೆಗೆ ವಿದ್ಯಾಭ್ಯಾಸ ಮಾಡುತ್ತಿರುವ ರೈತರ ಮಕ್ಕಳು ಹಾಗೂ ಭೂರಹಿತ ಕೃಷಿ ಕಾರ್ಮಿಕರ ಮಕ್ಕಳು ವಿದ್ಯಾರ್ಥಿವೇತನ ಪಡೆಯಲು ಅರ್ಹರಿರುತ್ತಾರೆ. ವಿದ್ಯಾರ್ಥಿ ವೇತನವನ್ನು ವಾರ್ಷಿಕವಾಗಿ ಬ್ಯಾಂಕ್ ಖಾತೆಗಳಿಗೆ ನೇರ ನಗದು ವರ್ಗಾವಣೆ ಪದ್ಧತಿಯ ಮೂಲಕ ವರ್ಗಾಯಿಸಲಾಗುವುದು.

೨೦೨೩-೨೪ನೇ ಸಾಲಿನಲ್ಲಿ ಇತರೆ ಇಲಾಖೆಗಳ(ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ಇತರೆ ಇಲಾಖೆಗಳು) ಯೋಜನೆಯಡಿ ವಿದ್ಯಾರ್ಥಿವೇತನ ಪಡೆಯುತ್ತಿರುವ ವಿದ್ಯಾರ್ಥಿಗಳು ಮುಖ್ಯಮಂತ್ರಿ ರೈತ ವಿದ್ಯಾನಿಧಿ ಕಾರ್ಯಕ್ರಮ ಹಾಗೂ ಭೂರಹಿತ ಕೃಷಿ ಕಾರ್ಮಿಕರ ವಿದ್ಯಾನಿಧಿ ಕಾರ್ಯಕ್ರಮದಡಿ ವಿದ್ಯಾರ್ಥಿವೇತನ ಪಡೆಯಲು ಅರ್ಹರಾಗುವುದಿಲ್ಲ.

೨೦೨೩-೨೪ನೇ ಸಾಲಿನಲ್ಲಿ ಮುಖ್ಯಮಂತ್ರಿ ರೈತ ವಿದ್ಯಾನಿಧಿ ಕಾರ್ಯಕ್ರಮ ಹಾಗೂ ಭೂರಹಿತ ಕೃಷಿ ಕಾರ್ಮಿಕರ ವಿದ್ಯಾನಿಧಿ ಕಾರ್ಯಕ್ರಮದಡಿ ವಿದ್ಯಾರ್ಥಿ ವೇತನ ಪಡೆಯಲು ಸಾಮಾನ್ಯ ವರ್ಗದ ವಿದ್ಯಾರ್ಥಿಗಳ ಪೋಷಕರ ಆದಾಯವು ರೂ. ೨.೫೦ ಲಕ್ಷ ಮೀರಿರಬಾರದು ಎಂಬ ಷರತ್ತನ್ನು ವಿಧಿಸಿರುವುದರಿಂದ ಸಾಮಾನ್ಯ ವರ್ಗದಡಿ ಬರುವ ರೈತರ ಮಕ್ಕಳು ತಮ್ಮ ಪೋಷಕರ ಆದಾಯ ಪ್ರಮಾಣಪತ್ರವನ್ನು ಸಲ್ಲಿಸಲು ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದ ವಿದ್ಯಾರ್ಥಿಗಳ ಲಾಗಿನ್‌ನಲ್ಲಿ ಅವಕಾಶ ಕಲ್ಪಿಸಲಾಗಿದ್ದು, ಫೆಬ್ರುವರಿ ೨೯ರೊಳಗೆ ಪ್ರಮಾಣಪತ್ರವನ್ನು ಅಪ್‌ಲೋಡ್ ಮಾಡಬೇಕು ಎಂದು ಜಂಟಿ ಕೃಷಿ ನಿರ್ದೇಶಕ ಜಿ.ಎಚ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಸಮೀಪದ ಡಿಡಿಪಿಐ, ಡಿಡಿಪಿಯು, ತಮ್ಮ ಕಾಲೇಜಿನ ಪ್ರಾಂಶುಪಾಲರು, ಸಮೀಪದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಭೇಟಿ ನೀಡಬಹುದು ಎಂದು ತಿಳಿಸಿದ್ದಾರೆ. ಎಲ್ಲಾ ಅರ್ಹ ರೈತರ ಮಕ್ಕಳು ಹಾಗೂ ಭೂರಹಿತ ಕೃಷಿ ಕಾರ್ಮಿಕರ ಮಕ್ಕಳು ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದಲ್ಲಿ (https://ssp.postmatric.karnataka.gov.in) ನೋಂದಾಯಿಸಿಕೊಳ್ಳಬಹುದಾಗಿದೆ.


Spread the love

LEAVE A REPLY

Please enter your comment!
Please enter your name here